ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 448.98 ಕೋಟಿ ರೂ. ಮೊತ್ತದ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ 2262 ಎಫ್ಐಆರ್ಗಳನ್ನು ದಾಖಲಿಸಲಾಗಿದೆ.
ಕುರಿತಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ಹೊರಡಿಸಿದ್ದು, 2029 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲಾಖೆಯ ‘ಘೋರ ಅಪರಾಧದಡಿಯಲ್ಲಿ 3,298 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪರವಾನಗಿ ಉಲ್ಲಂಘನೆಯಡಿ 5,392 ಪ್ರಕರಣಗಳನ್ನು ದಾಖಲಿಸಲಾಗಿದೆ, ಎನ್ಡಿಪಿಎಸ್ ಅಡಿಯಲ್ಲಿ 186 ಪ್ರಕರಣಗಳನ್ನು ಹಾಗೂ ಅಬಕಾರಿ ಕಾಯ್ದೆಯಡಿ 32,902 ಪ್ರಕರಣಗಳನ್ನುದಾಖಲಿಸಲಾಗಿದೆ.
ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, 2ನೇ ಹಂತದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 141.10 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಪೊಲೀಸರು, ಕ್ಷಿಪ್ರಪಡೆಗಳು, ಸ್ಥಿರ ಕಣ್ಣಾವಲು ತಂಡಗಳು ವಶಪಡಿಸಿಕೊಂಡಿವೆ. ಅಬಕಾರಿ ಇಲಾಖೆಯವರು 178.58 ಕೋಟಿ ರೂ. ವೌಲ್ಯದ ಮದ್ಯ, ಡ್ರಗ್ಸ್ ಅನ್ನು ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 49.19 ಕೋಟಿ ರೂ. ವೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.