ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ನಾಳೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಆವರಣದ ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಈ ಕುರಿತಂತೆ ಆದೇಶ ಹೊರಡಿಸಿರುವಂತ ತಹಶೀಲ್ದಾರ್, ದಿನಾಂಕ 25-02-2025ರ ನಾಳೆ ಸಾಗರ ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಅವರಣದಿಂದ 100 ಮೀಟರ್ ವ್ಯಾಪ್ತಿಯ ಒಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಚುನಾವಣಾಧಿಕಾರಿಗಳು ಕೋರಿದ್ದಾರೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ದಿನಾಂಕ 25-02-2025ರ ಮಂಗಳವಾರ ಬೆಳಿಗ್ಗೆ 9.30 ಗಂಟೆಯಿಂದ ದಿನಾಂಕ 25-02-2025ರ ಮಧ್ಯಾಹ್ನ 1.30ರವರೆಗೆ ಸಾಗರ ತಾಲ್ಲೂಕು ನಗರಸಭೆ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಬಿಎನ್ ಎಸ್ ಎಸ್ 2023ರ ಕಾಯ್ದೆ ಕಲಂ 163ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ನಿಷೇಧಾಜ್ಞೆ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದು ನಿಷೇಧಿಸಲಾಗಿದೆ. ಯಾವುದೇ ರಾತಿಯ ಆಯುಧ, ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರ ಆಸ್ತಿಗಳಿಗೆ ವಿರೂಪವನ್ನು ಉಂಟುಮಾಡುವಂತಿಲ್ಲ ಎಂದು ಖಂಡಕ್ ಸೂಚನೆ ನೀಡಲಾಗಿದೆ.
ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಿದ್ದಾರೆ.
ಈ ನಿಷೇಧಾಜ್ಞೆಯು ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಚುನಾವಣಾ ಕಾರ್ಯಾಚರಣ ಅಧಿಕಾರಿಗಳಿಗೆ, ಚುನಾವಣಾ ಏಜೆಂಟರು, ಏಣಿಕೆ ಏಜೆಂಟರು ಮತ್ತು ಏಣಿಕೆಗೆ ಹಾಜರಾಗುವವರಿಗೆ ಅನ್ವಯಿಸತಕ್ಕದ್ದಲ್ಲ ಅಂತ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು