ಬಾಗಲಕೋಟೆ : ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗೋವಿಂದಪ್ಪ ಸಿದ್ದಾಪುರ ಎಂಬುವರು ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಗೋವಿಂದಪ್ಪ ಸಿದ್ದಾಪುರ ಅವರು ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚುನಾವಣಾ ಕರ್ತವ್ಯಕ್ಕೆ ಮೈಗೂರು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳುತ್ತಿದ್ದಾಗ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share.
Exit mobile version