ಬೆಂಗಳೂರು: ದಿನಾಂಕ 17-06-2024ರಂದು ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ.
ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದು ತಿಳಿಸಿದೆ.
ದಿನಾಂಕ 17-06-2024ರಂದು ವಿಧಾನ ಪರಿಷತ್ತಿನ ಸದಸ್ಯರಾದಂತ ಅರವಿಂದ್ ಕುಮಾರ್ ಅರಳಿ, ಎನ್ ಎಸ್ ಬೋಸರಾಜು, ಕೆ ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿಎಂ, ಕೆ.ಪಿ ನಂಜುಂಡಿ, ಬಿಎಂ ಫಾರೂಕ್, ರಘುನಾಥ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್ ರುದ್ರೇಗೌಡ ಹಾಗೂ ಕೆ ಹರೀಶ್ ಕುಮಾರ್ ಅವರ ಅವಧಿ ಮುಗಿಯಲಿದೆ.
ಈ 11 ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಅಧಿಸೂಚನೆ ದಿನಾಂಕ 27-04-2024ರಂದು ಹೊರಡಿಸಲಾಗುತ್ತದೆ. ದಿನಾಂಕ 03-06-2024 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 04-06-2024ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 06-06-2024 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ದಿನಾಂಕ 13-06-2024ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ದಿನಾಂಕ 13-06-2024ರಂದು ಸಂಜೆ 5 ಗಂಟೆಯ ವೇಳೆಗೆ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಪ್ರಕಟಿಸಲಾಗುತ್ತದೆ.
ವರದಿ: ವಸಂತ ಬಿ ಈಶ್ವರಗೆರೆ
ಎಷ್ಟು ದಿನ ‘ಕಳ್ಳ ಪೊಲೀಸ್ ಆಟ’ ಆಡ್ತೀಯ, ಬಂದು ಶರಣಾಗು: ‘ಪ್ರಜ್ವಲ್ ರೇವಣ್ಣ’ಗೆ ‘HDK ಮನವಿ’
BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ