ಧಾರವಾಡ : ಲೋಕಸಭಾ ಚುನಾವಣೆ ಕುರಿತಾಗಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ನಿಗದಿಯಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರರು ಭಾಗಿಯಾಗಿದ್ದರು.
ಈ ಸಭೆಯ ಕುರಿತಾಗಿ ಧಾರವಾಡದಲ್ಲಿ ಕೇಂದ್ರ ಸಚಿವರಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಎಚ್ ಡಿ ಕುಮಾರಸ್ವಾಮಿ ಸಭೆ ನಡೆಸಿದ್ದಾರೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ನೀಡಿದ್ದು ವಿಧಾನ ಪರಿಷತ್ ಸದಸ್ಯರ ಚುನಾವಣೆ ಕುರಿತಂತೆ ಚರ್ಚೆ ಆಗಿದೆ ಎಂದು ತಿಳಿಸಿದರು.
ಪರಿಷತ್ತಿನ ಆರು ಸ್ಥಾನಗಳ ಬಗ್ಗೆ ಸಮಲೋಚನೆ ನಡೆಸಲಾಗಿದೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಚರ್ಚೆ ನಡೆಸಿಲ್ಲ ಈ ವಿಚಾರ ರಾಷ್ಟ್ರೀಯ ನಾಯಕರು ಸಭೆ ನಡೆಸಿ ನಿರ್ಧರಿಸುತ್ತಾರೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು..
ಮುನೇನ ಕೊಪ್ಪ ಬಿಜೆಪಿಯಲ್ಲಿ ಇರುವುದಾಗಿ ಹೇಳಿದ್ದಾರೆ.ಜನವರಿ 31ರವರೆಗೂ ನಾನು ಎಲ್ಲೂ ಗುರುತಿಸಿಕೊಳ್ಳುವುದಿಲ್ಲ ಅಂತ ಹೇಳಿದ್ದಾರೆ.ಜನವರಿ 31ರ ಬಳಿಕ ಭೇಟಿ ಮಾಡುವುದಾಗಿ ಮುನೇನಕೊಪ್ಪ ತಿಳಿಸಿದ್ದಾರೆ. ಜನವರಿ 31ರ ನಂತರ ನೋಡೋಣ ಅಂತ ತಿಳಿಸಿದ್ದೇನೆ ಎಂದು ಹೇಳಿದರು.