Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮೊಬೈಲ್ `EMI’ ಕಟ್ಟದಿದ್ದರೆ ಫೋನ್ ಲಾಕ್? RBI ಹೊಸ ಪ್ರಸ್ತಾಪ| Mobile EMI

​ಆರ್‌ ಜಿ ಕರ್ ಪ್ರಕರಣಕ್ಕೆ ಕಲ್ಕತ್ತಾ ಹೈಕೋರ್ಟ್ ಬಿಗ್ ಟ್ವಿಸ್ಟ್!: ಹೊಸ CBI ತಂಡ ರಚನೆಗೆ ಆದೇಶ : ಜೂನ್ 25 ರೊಳಗೆ ವರದಿ ಸಲ್ಲಿಸಲು ಗಡುವು!

ಪರೀಕ್ಷೆಯ ವಿಶ್ವಾಸಾರ್ಹತೆಗೆ ಧಕ್ಕೆ: ‘NEET’ ರದ್ದುಗೊಳಿಸಿದ್ದಾಗಿ ಸಂಸದೀಯ ಸಮಿತಿ ಮುಂದೆ ಒಪ್ಪಿಕೊಂಡ ಎನ್‌ಟಿಎ ಅಧಿಕಾರಿಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸುಳಿವು
KARNATAKA

BIG NEWS: ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ ಸಿದ್ಧರಾಮಯ್ಯ ಸುಳಿವು

By ವಸಂತ ಬಿ ಈಶ್ವರಗೆರೆ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಮೂಲಕ ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ಘೋಷಣೆ ಮಾಡೋ ಸುಳಿವು ನೀಡಿದರು.

ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದರು.

ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ

ಈ ಬಾರಿ ಡಾ: ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ರನ್ನಾಗಿಸಲು ಒತ್ತಡವಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹೈ ಕಮಾಂಡ್ ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ನಾನು ಬಾರಿ ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದರು.

ಪ್ರಕರಣ ದುರ್ಬಲಗೊಳಿಸಲು ಹೇಳಿಕೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೋ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.

ನಂಬಿರುವುದು ನಿಮ್ಮ ತಪ್ಪು

ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು ಎಂದರು.

ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ ಎಂದರು.

ಪಿಎಂಒ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ

ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದರು.

ಬಿಜೆಪಿಯವರನ್ನು ಪ್ರಶ್ನಿಸಿ

ಚುನಾವಣಾ ಫಲಿತಾಂಶಕ್ಕಾಗಿ ಇದನ್ನು ವಿಳಂಬ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಪ್ರಶ್ನೆಯನ್ನು ಬಿಜೆಪಿಯ ಪ್ರಹ್ಲಾದ್ ಜೋಶಿ ಅವರನ್ನು ಕೇಳಿ ಎಂದರು.

ಮನೆಯವರಿಗೆ ಹೇಳದೆ ವಿದೇಶಕ್ಕೆ ತೆರಳಿದರೇ ದೇವೇಗೌಡರು ಪ್ರಜ್ವಲ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿರುವ ಬಗ್ಗೆ ಮಾತನಾಡಿ ಇವರಿಗೆ ಗೊತ್ತಿಲ್ಲದೆ ಪ್ರಜ್ವಲ ರೇವಣ್ಣ ಹೊರಟು ಹೋಗಿದ್ದಾರಾ? ಎಂದು ಪ್ರಶ್ನಿಸಿದರು.

ಪ್ರಚಾರಕ್ಕೆ ಏಕೆ ಹೋಗಿದ್ದರು

ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಸಂಪರ್ಕವೂ, ಅಲ್ಲವೋ ಎಂದು ಪ್ರಶ್ನಿಸಿದರು.

ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ

ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದರು.

ಪರಿಶೀಲನೆ

ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು

2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

Share. Facebook Twitter LinkedIn WhatsApp Email

Related Posts

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

2 Mins Read

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

3 Mins Read

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

2 Mins Read
Recent News

BIG NEWS : ಮೊಬೈಲ್ `EMI’ ಕಟ್ಟದಿದ್ದರೆ ಫೋನ್ ಲಾಕ್? RBI ಹೊಸ ಪ್ರಸ್ತಾಪ| Mobile EMI

​ಆರ್‌ ಜಿ ಕರ್ ಪ್ರಕರಣಕ್ಕೆ ಕಲ್ಕತ್ತಾ ಹೈಕೋರ್ಟ್ ಬಿಗ್ ಟ್ವಿಸ್ಟ್!: ಹೊಸ CBI ತಂಡ ರಚನೆಗೆ ಆದೇಶ : ಜೂನ್ 25 ರೊಳಗೆ ವರದಿ ಸಲ್ಲಿಸಲು ಗಡುವು!

ಪರೀಕ್ಷೆಯ ವಿಶ್ವಾಸಾರ್ಹತೆಗೆ ಧಕ್ಕೆ: ‘NEET’ ರದ್ದುಗೊಳಿಸಿದ್ದಾಗಿ ಸಂಸದೀಯ ಸಮಿತಿ ಮುಂದೆ ಒಪ್ಪಿಕೊಂಡ ಎನ್‌ಟಿಎ ಅಧಿಕಾರಿಗಳು!

ಫಾಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕರಾಳ ಹಸ್ತ: ‘ಗೋಪ್ರೋ’ ಕ್ಯಾಮೆರಾ ಮತ್ತು 2024 ರ ದಾಳಿಯ ಲಿಂಕ್ ಬಿಚ್ಚಿಟ್ಟ ಎನ್‌ಐಎ!

State News
KARNATAKA

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಅಟಲ್ ಜೀ ಜನಸ್ನೇಹಿ ಕೇಂದ್ರಗಳ (AJSK) ಮೂಲಕ ನೀಡಲಾಗುವ ವಿವಿಧ ಸಾರ್ವಜನಿಕ…

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.