ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.
ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3 ಗಂಟೆ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಸದಸ್ಯರ ಸಹಿ ದಾಖಲಿಸುವುದು, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
ಗಮನಿಸಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
GOOD NEWS: ‘ಮಹಾನಗರ ಪಾಲಿಕೆಯ ನೌಕರ’ರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘7ನೇ ವೇತನ’ ಜಾರಿಗೊಳಿಸಿ ಆದೇಶ