ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ಹಾಗೂ ಅವಧಿ ಮುಕ್ತಾಯಗೊಂಡಿರುವಂತ ರಾಜ್ಯದ ವಿವಿಧ ಜಿಲ್ಲೆಗಳ ವಾರ್ಡ್ ಗಳು ಹಾಗೂ ಗ್ರಾಮ ಪಂಚಾಯ್ತಿಯ ( Gramapanchayath ) ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣೆ ( Local Body Election 2023 ) ವ್ಯಾಪ್ತಿಯ ತುರ್ತು ಸೇವೆ ಇಲಾಖೆ ಹೊರತುಪಡಿಸಿ, ಎಲ್ಲಾ ಇಲಾಖೆಗಳು, ಖಾಸಗಿ ಸಂಸ್ಥೆಗಳಿಗೆ ವೇತನ ಸಹಿತ ರಜೆಯನ್ನು ( Paid leave ) ರಾಜ್ಯ ಸರ್ಕಾರ ( Karnataka Governmnet ) ಘೋಷಣೆ ಮಾಡಲಾಗಿದೆ.
BREAKING NEWS: 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಶಿಕ್ಷೆ
ಈ ಕುರಿತಂತೆ ರಾಜ್ಯ ಸರ್ಕಾರದ ಅಪರ ಕಾರ್ಯದರ್ಶಿ ಅಧಿಸೂಚನೆ ಹೊರಡೆಸಿದ್ದು, ರಾಜ್ಯ ಚುನಾವಣಾ ಆಯೋಗವು ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಹಾಗೂ 10 ಜಿಲ್ಲೆಯ 28 ವಾರ್ಡ್ ಗಳು ಮತ್ತು 252 ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಗಳಿಗೆ ನಾಳೆ ಮತದಾದನಕ್ಕೆ ದಿನಾಂಕವನ್ನು ನಿಗದಿ ಪಡಿಸಿದೆ.
SBIನ ʻUTSAVʼ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಾಳೆಯೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ
ನಾಳೆ ಸಾರ್ವತ್ರಿಕ, ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳಉ, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ-ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಎಸ್ಟಬ್ಲಿಷ್ ಮೆಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವವ ಅರ್ಹ ಮತದಾರರಿಗೆ ನೌಕರಿಗೆ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ತಿಳಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ