ರಾಯಚೂರು :  ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಬಸ್ ಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು. 

ರಾಯಚೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಬಸ್ಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ, ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದರು,

ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಅನುದಾನದಲ್ಲಿ 1,600 ಬಸ್ಗಳನ್ನು ಖರೀದಿ ಮಾಡಲಾಗುವುದು. ಬೆಂಗಳೂರು ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಎಲೆಕ್ಟ್ರಿಕ್ ಬಸ್ಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು. . 2030ರ ಒಳಗಾಗಿ 27,000 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲಾಗುವುದು. ಈಗಾಗಲೇ ಈ ಬಗ್ಗೆ ನಮ್ಮ ಸರ್ಕಾರ ಕ್ರಿಯಾಯೋಜನೆ ರೂಪಿಸಿದೆ. ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ಗಳು ಓಡಾಡುತ್ತಿದ್ದು, ಇನ್ಮುಂದೆ ರಾಜ್ಯಾದ್ಯಂತ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಾಗುತ್ತದೆ,  ಕಲ್ಯಾಣ ಕರ್ನಾಟಕ ಭಾಗಕ್ಕೆ 1,600 ಬಸ್ಗಳನ್ನು ಖರೀದಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

BIGG NEWS : ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : ‘8 ಐಎಎಸ್, 11 ಐಪಿಎಸ್ ಅಧಿಕಾರಿ’ಗಳ ವರ್ಗಾವಣೆ

BIGG NEWS : ಪುಲ್ವಾಮ ದಾಳಿಯನ್ನು ಸಮರ್ಥಿಸಿ ಪೋಸ್ಟ್ : ಎಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ

Share.
Exit mobile version