ಬೆಂಗಳೂರು : ರಾಜ್ಯದಲ್ಲಿ ನಿರ್ಮಾಣವಾದ ಕಟ್ಟಡಗಳಿಗೆ ಓಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಿಲಿಕೆ ಮಾಡುವ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿರುವವರಿಗೆ ನಿಯಮಗಳನ್ನು ಸಡಿಲಿಸಿ, ಒಂದು ಬಾರಿಯ ) (One Time Relaxation) ಅಸ್ತಿತ್ವದಲ್ಲಿರುವ ನಿಯಮಗಳಂತೆ ಗುರುತಿನ 23563 ಮತ್ತು ಮಾಲೀಕತ್ವದ ಪುರಾವೆಗಳನ್ನು ಪರಿಗಣಿಸಿ, (ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೆ) ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ನಿರ್ಧರಿಸಲಾಗಿದೆ.
ಈಗಾಗಲೇನಿರ್ಮಾಣವಾಗಿರುವ ಕಟ್ಟಡಗಳಿಗೆ ಓಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಬಾರಿಗೆ ಅನ್ವಯಿಸುವಂತೆ ಒಂದು ನಿಯಮಗಳನ್ನು ಸಡಲಿಸುವ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಯಾವುದೇ ನಿರ್ಧಾರ ಮಾಡದೆ ವಿಷಯವನ್ನು ಮುಂದಿನ ಸಂಪುಟಕ್ಕೆ ಮುಂದೂಡಲಾಗಿದೆ.