Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು HPV ಲಸಿಕೆ ಅಭಿಯಾನಕ್ಕೆ ಚಾಲನೆ

28/02/2026 7:50 PM

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

28/02/2026 7:37 PM

BREAKING : ‘ಸಂಯಮದಿಂದಿರಿ, ನಾಗರಿಕರಿಗೆ ಆದ್ಯತೆ ನೀಡಿ’ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಿಲ್ಲಿಸಲು ಭಾರತ ಮನವಿ

28/02/2026 7:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್
KARNATAKA

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0928/02/2026 7:37 PM

ಮಂಡ್ಯ : ಬೇಸಿಗೆ ವೇಳೆಗೆ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ ತಲೆದೋರುವುದಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು.

ಮದ್ದೂರು ತಾಲೂಕಿನ ನಗರಕೆರೆ, ತೊರೆಚಾಕನಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರ ಬೇಸಾಯಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈಗಾಗಲೇ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ರಾತ್ರಿ ಹೊತ್ತಿನಲ್ಲಿ ವಿದ್ಯುತ್ ನೀಡಿದರೆ ಚಿರತೆ, ಹಾವು ಕಾಡು ಪ್ರಾಣಿಗಳಿಂದ ಸಾವು ನೋವು ಸಂಭವಿಸಲಿದ್ದು, ಹೀಗಾಗಿ ರೈತರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಹಗಲಿನಲ್ಲೆ ನೀಡಲಿದ್ದು, ಮುಂಬರುವ ಬೇಸಿಗೆ ವೇಳೆಗೆ ವಿದ್ಯುತ್ ಸಮಸ್ಯೆ ಉಂಟಾಗುವುದಿಲ್ಲ ಎಂದರು.

ಸೋಮನಹಳ್ಳಿ ಬಳಿ ಈಗಾಗಲೇ 220 ಕೆವಿ ಸಬ್ ಸ್ಟೇಷನ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಕೆಲ ದಿನಗಳಲ್ಲೇ ಸಚಿವರಾದ ಕೆ.ಜೆ ಜಾರ್ಜ್ ಅವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಒಂದು ವರ್ಷದೊಳಗೆ ಕಾಮಗಾರಿ ಮುಕ್ತಾಯವಾಗಿ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ನೀಡಲಾಗುವುದು ಎಂದರು.

ಇನ್ನು ಗೆಜ್ಜಲಗೆರೆ ಗ್ರಾಪಂ ಆವರಣದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರವರು ಶನಿವಾರ ಆಗಮಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದರಲ್ಲೇನೂ ವಿಶೇಷತೆ ಇಲ್ಲಾ ಒಬ್ಬರಾದ ಮೇಲೊಬ್ಬರಂತೆ ವಿರೋಧ ಪಕ್ಷದವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ನನ್ನ ಬೆಂಬಲವಿದೆ ಎಂದು ಹೇಳುತ್ತಿರುವುದು ರಾಜಕೀಯ ಪ್ರೇರಿತ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದರು.

ಸ್ವಲ್ಪ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರು, ನಾನು ಹಾಗೂ ಜಿಲ್ಲಾಡಳಿತ ಪ್ರತಿಭಟನೆಯ ಮುಖಂಡರುಗಳ ಜತೆಯಲ್ಲಿ ಸಭೆ ನಡೆಸಿ ಮಾತನಾಡಿ, ಕೆಲ ಭರವಸೆ ನೀಡಲಾಗಿದೆ. ಅದಲ್ಲದೆ ಈಗಾಗಲೇ ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅದರಂತೆ ಅವರು ಕಾಯಬೇಕು. ಅದು ಬಿಟ್ಟು ಶಾಂತಿಯುತ ಪ್ರತಿಭಟನೆಯನ್ನು ನಡೆಸದೆ ಗೇಟ್ ಬೀಗ ಒಡೆಯುವುದು, ರಸ್ತೆ ತಡೆ ಮಾಡುವುದು, ಕಛೇರಿಗೆ ಬೀಗ ಜಡಿಯುವುದು, ರಾಜಕೀಯ ಮಾಡುವುದು ಸೇರಿದಂತೆ ಇತ್ಯಾದಿಗಳು ಗೂಂಡಾಗಿರಿ ಮಾಡಿದಂತೆ ಅಲ್ಲವೇ ಎಂದು ಪ್ರಶ್ನಿಸಿದರು.

ಇದೇ ವೇಳೆ ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಗ್ರಾಪಂ ಮಾಜಿ ಅಧ್ಯಕ್ಷ ನಗರಕೆರೆ ಸಂದೀಪ್, ಮುನ್ ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೆಶಕ ಸಂದರ್ಶ, ಅಜ್ಜಹಳ್ಳಿ ರಾಮಕೃಷ್ಣ, ಮುಖಂಡರಾದ ಚಾವಿ, ಅಶೋಕ್, ಸುರೇಶ್, ಇಂದು ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು HPV ಲಸಿಕೆ ಅಭಿಯಾನಕ್ಕೆ ಚಾಲನೆ

28/02/2026 7:50 PM1 Min Read

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

28/02/2026 7:22 PM3 Mins Read

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM3 Mins Read
Recent News

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು HPV ಲಸಿಕೆ ಅಭಿಯಾನಕ್ಕೆ ಚಾಲನೆ

28/02/2026 7:50 PM

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

28/02/2026 7:37 PM

BREAKING : ‘ಸಂಯಮದಿಂದಿರಿ, ನಾಗರಿಕರಿಗೆ ಆದ್ಯತೆ ನೀಡಿ’ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಿಲ್ಲಿಸಲು ಭಾರತ ಮನವಿ

28/02/2026 7:36 PM

VIDEO : ಕೋಟ್ಯಂತರ ರೂಪಾಯಿ ಸಾಗಿಸ್ತಿದ್ದ ಬೊಲಿವಿಯಾ ವಾಯುಪಡೆ ವಿಮಾನ ರಸ್ತೆಯಲ್ಲೇ ಪತನ ; 15 ಮಂದಿ ಸಾವು!

28/02/2026 7:22 PM
State News
KARNATAKA

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು HPV ಲಸಿಕೆ ಅಭಿಯಾನಕ್ಕೆ ಚಾಲನೆ

By kannadanewsnow0928/02/2026 7:50 PM KARNATAKA 1 Min Read

ಬೆಂಗಳೂರು : ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ…

ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

28/02/2026 7:37 PM

ಕಷ್ಟ ಪರಿಹರಿಸಲು ಆಂಜನೇಯನಿಗೆ ಈ ವಸ್ತು ಕೊಡುತ್ತೇನೆಂದು ಹರಕೆ ಮಾಡಿಕೊಳ್ಳಿ

28/02/2026 7:22 PM

ಮಂಡ್ಯದ ಗೆಜ್ಜಲಗೆರೆಯಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ HDK ವಾರ್ನಿಂಗ್

28/02/2026 6:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.