ಬೆಂಗಳೂರು : ಗ್ಯಾಂರಂಟಿ ಯೋಜನೆಗಳ ಘೋಷಣೆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ, ಎರಡು ನೂರು ಯೂನಿಟ್ ಉಚಿತ ವಿದ್ಯುತ್ ಗ್ಯಾರಂಟಿಯೊಂದಿಗೆ ಅಧಿಕಾರಕ್ಕೆ ಬಂದ ಬಂದು ಈಗ ಅನಧಿಕೃತ ಲೋಡ್ ಶೆಡ್ಡಿಂಗ್ ಆರಂಭಿಸಿದ್ದು, ರೈತಾಪಿ ವರ್ಗವನ್ನು ಕಂಗೆಡಿಸಿದೆ. ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ನೀಡಲಾಗುತ್ತಿದ್ದ ವಿದ್ಯುತ್ ದಿಢೀರ್ 3 ತಾಸು ಕಡಿತದ ಅನುಮಾನ ಮೂಡಿದೆ.ಇದರಿಂದ ಹಲವು ರೈತಾಪಿ ವರ್ಗದ ಹಲವು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.
ಬೇಸಿಗೆಗೆ ಮುನ್ನವೇ ಲೋಡ್ ಶೆಡ್ಡಿಂಗ್ ಜಾರಿಗೆ ಮೌಖಿಕವಾಗಿ ಅಧಿಕಾರಿಗಳಿಗೆ ನಿರ್ದೇಶನ ರವಾನೆಯಾಗುತ್ತಿದೆ ಎನ್ನಲಾಗಿದೆ. ವಿದ್ಯುತ್ ಪರಿವರ್ತಕಗಳ ನಾತು ರಿಪೇರಿ, ಫೀಡರ್ ಕಾರಣ ನೀಡುತ್ತಿರುವ ಅಧಿಕಾರಿಗಳು ರೈತರ ಕಣ್ಮರೆಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಸ್ತುತ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಪ್ರಾಯೋಗಿಕವಾಗಿ 2 ತಾಸು ವಿದ್ಯುತ್ ಕಡಿತಗೊಳ್ಳುತ್ತಿದ್ದು, ಹಂತ-ಹಂತವಾಗಿ ಇತರ ಜಿಲ್ಲೆಗಳಿಗೂ ವಿಸ್ತರಣೆಯಾಗುವ ಲಕ್ಷಣ ಕಂಡುಬರುತ್ತಿದೆ.
ರಾಜ್ಯದಲ್ಲಿ ಸುಮಾರು 32 ಲಕ್ಷ ಕೃಷಿ ಪಂಪ್‌ಸೆಟ್‌ಗಳಿದ್ದು, ಕೃಷಿ ವಲಯಕ್ಕೆ ಶೇ.35 ವಿದ್ಯುತ್ ಬಳಕೆಯಾಗುತ್ತಿದೆ. ಮಳೆ ಕೊರತೆಯಿಂದ ಎಲ್ಲೆಡೆ ಪಂಪ್ ಸೆಟ್‌ಗಳ ಅವಲಂಬನೆ ಹೆಚ್ಚಾಗಿದೆ. ಮಳೆಯಾಶ್ರಿತ ಪ್ರದೇಶಗಳು ಸಂಪೂರ್ಣ ಒಣಗಿಹೋಗಿದ್ದರೆ, ಕೊಳವೆಬಾವಿ ಆಶ್ರಿತ ಪ್ರದೇಶಗಳಲ್ಲಿ ಬೆಳೆ ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ನಿಯಮದಂತೆ ಕೃಷಿ ಪಂಪ್‌ಸೆಟ್ ಗೆ ಹಗಲಿನಲ್ಲಿ 4 ಗಂಟೆ ವಿದ್ಯುತ್ ಪೂರೈಸಬೇಕು ಎಂಬ ನಿಯಮವಿದೆ. ಆದರೆ ಇದೀಗ ರೈತರಿಗೆ ಲೋಡ್ ಶೆಡ್ಡಿಂಗ್ ಮೂಲಕ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.