ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವಂತ ರಾಜ್ಯದ ಜನತೆಗೆ ಈಗ ಕರೆಂಟ್ ಶಾಕ್ ಕೊಡೋದಕ್ಕೆ ಕೆಇಆರ್ ಸಿ ಮುಂದಾಗಿದೆ. ಇಂದು ಸಂಜೆಯಿಂದಲೇ ವಿದ್ಯುತ್ ದರ ಪರಿಷ್ಕರಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಬಾರಿ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗದಿಂದ ಲೋಕಸಭಾ ಚುನಾವಣೆ (LokSabha Elections)ಗೂ ಮುನ್ನವೇ ವಿದ್ಯುತ್ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.
ಇಂದು ಸಂಜೆಯೇ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆ ಮಾಡಿ, ಅಧಿಕೃತವಾಗಿ ಸ್ಲ್ಯಾಬ್ ಕೂಡ ತನ್ನ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ.
ಅಂದಹಾಗೇ ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಲಾಗುತ್ತಿತ್ತು. ಆದರೇ ಈಗ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಗೊಂಡರೇ ಪರಿಷ್ಕರಣೆ ಮಾಡೋದಕ್ಕೆ ಸಾಧ್ಯವಾಗೋದಿಲ್ಲ ಎನ್ನುವ ಕಾರಣಕ್ಕೆ, ಇಂದು ಸಂಜೆಯೇ ಪರಿಷ್ಕೃತ ದರಪಟ್ಟಿಯನ್ನು ಕೆಇಆರ್ ಸಿ ಪ್ರಕಟಿಸಲಿದೆ.
ಕಳೆದ ವರ್ಷ ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಲಾಗಿತ್ತು. ಈ ಗ್ಯಾರಂಟಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು.
ಪಾಕಿಸ್ತಾನ ಪರ ಘೋಷಣೆ ಆರೋಪ : ತುಮಕೂರಲ್ಲಿ ‘ಬಿಜೆಪಿ ಕಾರ್ಯಕರ್ತರ’ ಪ್ರತಿಭಟನೆ ವೇಳೆ ‘Dysp’ ಮೇಲೆ ಹಲ್ಲೆ
BREAKING: ‘ಮಾಜಿ ಪ್ರಧಾನಿ ರಾಜೀವ್ ಗಾಂಧಿ’ ಹಂತಕ ‘ಸಂತನ್’ ಹೃದಯಾಘಾತದಿಂದ ನಿಧನ