ಗದಗ: ಜಿಲ್ಲೆಯ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಐದು ಬಾಂಬ್ ಗಳಿಂದ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಬೆದರಿಕೆ ಸಂದೇಶ ಕಂಡು ಜಿಲ್ಲಾಡಳಿತ ಭವನದ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ.
ಪಾಕ್ ಐಎಸ್ಐ, ಎಲ್ ಟಿಟಿಇ ಕಾರ್ಯಕರ್ತರ ಜೊತೆ ಸೇರಿ ಸ್ಪೋಟಿಸುವುದಾಗಿ ಧಮ್ಕಿ ಹಾಕಲಾಗಿದೆ. ಗದಗ ಜಿಲ್ಲಾಡಳಿತ ಭವನದ ಐದು ಕಡೆಯಲ್ಲಿ ಬಾಂಬ್ ಇಟ್ಟಿರುವುದಾಗಿಯೂ ಇ-ಮೇಲ್ ನಲ್ಲಿ ತಿಳಿಸಲಾಗಿದೆ. ಹೀಗಾಗಿ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ಅಧಿವೇಶನವನ್ನು 1 ವಾರ ವಿಸ್ತರಿಸಿ: ಸ್ಪೀಕರ್ ಯು.ಟಿ ಖಾದರ್ ಗೆ ಪತ್ರ ಬರೆದು ಆರ್.ಅಶೋಕ್ ಆಗ್ರಹ








