`EMI’ ಮುಂದೂಡಿಕೆ ಅವಧಿಯ ಬಡ್ಡಿ ಮನ್ನಾ : ಸಾಲಗಾರರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್ – Kannada News Now


India

`EMI’ ಮುಂದೂಡಿಕೆ ಅವಧಿಯ ಬಡ್ಡಿ ಮನ್ನಾ : ಸಾಲಗಾರರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ : ಸಾಲ ಇಎಂಐ ಮುಂದೂಡಿಕೆ ಅವಧಿಯ ಬಡ್ಡಿ ಮನ್ನಾ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಿಹಿಸುದ್ದಿ ನೀಡುವ ಸಾಧ್ಯತೆ ಇದ್ದು, ಕೊರೊನಾ ವೈರಸ್ ನಿಂದಾಗಿ ಸಾಲದ ಕಂತು ಮರುಪಾವತಿ ಅವಧಿಯ ಬಡ್ಡಿ ಮನ್ನಾ ಮಾಡುವ ವಿಚಾರವನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಇಎಂಐ ಮುಂದೂಡಿಕೆ ಮಾಡಲು ಅವಕಾಶ ನೀಡಿರುವ ಬ್ಯಾಂಕುಗಳು ಮುಂದೂಡಿಕೆ ಮಾಡಲ್ಪಟ್ಟ ಕಂತಿಗೂ ಬಡ್ಡಿ ವಿಧಿಸುತ್ತಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.ಅದರ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಬಡ್ಡಿ ವಿಧಿಸುವುದನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿತ್ತು.

ಇನ್ನು ಸಾಲದ ಕಂತುಗಳ ಮೇಲಿನ ಬಡ್ಡಿ ಮನ್ನಾ ಮಾಡುವ ಸಂಬಂದ ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ಅವರು ಲೋಕಸಭೆಗೆ ಮಾಹಿತಿ ನೀಡಿದ್ದು,  ಇಎಂಐ ಬಡ್ಡಿ ಮನ್ನಾ ನಿರೀಕ್ಷೆ ಭರವಸೆ ಮೂಡಿಸಿದೆ.