ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಸೌಲಭ್ಯ ಪಡೆಯೋದಕ್ಕೆ ಇಲಾಖಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿದೆ. ಇದೀಗ ಕೆಪಿಎಸ್ಸಿಯಿಂದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ( Departmental examination of the second session ) ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದಿಂದ ( Karnataka Public Service Commission – KPSC ) ಮಾಹಿತಿ ನೀಡಲಾಗಿದ್ದು 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಸರ್ಕಾರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ( Online Application ) ಆಹ್ವಾನಿಸಲಾಗಿದೆ ಎಂದಿದೆ.
ಇನ್ನೂ ಅರ್ಜಿ ಸಲ್ಲಿಕೆ ದಿನಾಂಕ 12-01-2023ರಿಂದ ಆರಂಭಗೊಳ್ಳಲಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 31-01-2023 ಆಗಿರುತ್ತದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ www.kpsc.kar.nic.in ಜಾಲತಾಣಕ್ಕೆ ಭೇಟಿ ನೀಡಿ ಪಡೆಯುವಂತೆ ತಿಳಿಸಿದೆ.