ಬೆಂಗಳೂರು : ಹಳೆ ಪಿಂಚಣಿ ವ್ಯವಸ್ಥೆ (OPS) ಜಾರಿಗೆ ಹಾಗೂ 8ನೇ ವೇತನ ಆಯೋಗದ ವರದಿ ಜಾರಿಗಾಗಿ ಬೇಡಿಕೆಯಿಟ್ಟು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಲಾಗಿದೆ.ಒಂದು ವೇಳೆ ಹಳೆಯ ಪಿಂಚಣಿ ಯೋಜನೆ ಜಾರಿಯಾಗದಿದ್ದರೆ ಜುಲೈ 29ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
7ನೇ ವೇತನ ಆಯೋಗ ಹಾಗೂ ಹಳೆ ಪಿಂಚಣಿ ಯೋಜನೆ (OPS) ಜಾರಿ ಕುರಿತು ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆ ಆಗಿದ್ದು ತಮ್ಮ ಬೇಡಿಕೆ ಈಡೇರಿಸಿದರೆ ಮಾತ್ರ ಕೆಲಸಕ್ಕೆ ಹಾಜರಾಗುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಕೆಲಸ ಮಾಡದೇ ಮನೆಯಲ್ಲಿರುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ಸಂಘದಿಂದ ಎಚ್ಚರಿಕೆ ನೀಡಲಾಗಿದೆ.
7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ಈ ಹಿಂದೆ ಕೂಡ ಕರೆಕೊಟ್ಟಿತ್ತು. ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಬಾರದು. ಸಾರ್ವಜನಿಕರಿಗೆ ತೊಂದರೆಯಾಗಬಾರದು ಸರ್ಕಾರ ಕಸರತ್ತು ನಡೆಸಿತ್ತು. ಸರ್ಕಾರದ ಮುಖ್ಯಕಾರ್ಯದರ್ಶಿ ಸಭೆ ನಡೆಸಿದ್ರೂ ಸಕ್ಸಸ್ ಆಗಿರಲಿಲ್ಲ.
ಆದರೆ ಇಂದು ಹಳೆ ಪಿಂಚಣಿ ವ್ಯವಸ್ಥೆ (OPS) ಜಾರಿಗೆ ಹಾಗೂ 8ನೇ ವೇತನ ಆಯೋಗದ ವರದಿ ಜಾರಿಗಾಗಿ ಬೇಡಿಕೆಯಿಟ್ಟು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.