Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ದೇಶಾದ್ಯಂತ `NEET UG’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | NEET UG Exam 2026

03/05/2026 5:49 AM

ರಾಜ್ಯದಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಮೇ ಅಂತ್ಯದ ಗಡುವು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

03/05/2026 5:47 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ನಿಮ್ಮ ಮೊಬೈಲ್ ಗೆ ಬರಲಿದೆ `ಆಸ್ತಿ ದಾಖಲೆ’ಗಳು.!

03/05/2026 5:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಮೇ ಅಂತ್ಯದ ಗಡುವು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
KARNATAKA

ರಾಜ್ಯದಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಮೇ ಅಂತ್ಯದ ಗಡುವು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

By kannadanewsnow5703/05/2026 5:47 AM

ಬೆಂಗಳೂರು: ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾದ ಎಲ್ಲಾ ಯೋಜನೆಗಳು ಮೇ ತಿಂಗಳ ಒಳಗಾಗಿ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ನಿಗದಿತ ಅವಧಿಯಲ್ಲಿ ಯೋಜನೆಗಳು ಅನುಷ್ಠಾನಗೊಳ್ಳದಿದ್ದರೆ ಆಯಾ ಇಲಾಖೆಯ ಕಾರ್ಯದರ್ಶಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ನಡೆದ ಇಲಾಖಾ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಅವರು ‘ಪ್ರಗತಿ ಕೈಪಿಡಿ’ಯನ್ನು ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳ ಪ್ರಮುಖ ಸೂಚನೆಗಳು:

• ರಾಜ್ಯದ ಆಡಳಿತ ಸಮರ್ಪಕವಾಗಿ ನಡೆಯಲು ಇಲಾಖಾ ಕಾರ್ಯದರ್ಶಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ. ಸಂವಿಧಾನದ ಆಶಯಗಳ ಪ್ರಕಾರ ಕಾರ್ಯ ನಿರ್ವಹಿಸಬೇಕಾದುದು ಎಲ್ಲಾ ಕಾರ್ಯದರ್ಶಿಗಳ ಕರ್ತವ್ಯವಾಗಿದೆ. ಸಂವಿಧಾನಕ್ಕೆ ವಿರುದ್ಧವಾದ ಯಾವುದೇ ಕಾರ್ಯವನ್ನು ಮಾಡಬಾರದು.

• ವಲ್ಲಭಬಾಯ್ ಪಟೇಲ್ ಅವರು ʻಕಾರ್ಯದರ್ಶಿಗಳು ನಿರ್ಭಯವಾಗಿ ಸ್ವತಂತ್ರವಾಗಿ ತಮ್ಮ ಅಭಿಪ್ರಾಯಗಳನ್ನು ಮಂತ್ರಿಗಳಿಗೆ ತಿಳಿಸಬೇಕು. ಮಂತ್ರಿ ಅಸಮಾಧಾನಗೊಳ್ಳುತ್ತಾರೆ ಎಂದು ಸತ್ಯ ಹೇಳುವುದರಿಂದ ಹಿಂಜರಿಯಬಾರದುʼ ಎಂದು ಸಂವಿಧಾನ ಸಭೆಯಲ್ಲಿ ಹೇಳಿದ್ದರು. ಇದರಂತೆ ಹಿರಿಯ ಅಧಿಕಾರಿಗಳು ನಿಮ್ಮ ಅಭಿಪ್ರಾಯಗಳನ್ನು ನಿರ್ಭಯವಾಗಿ, ಸ್ವತಂತ್ರವಾಗಿ, ಸತ್ಯವಾಗಿ ಹೇಳಿ.

• ಅಧಿಕಾರಿಗಳು ಯಾವತ್ತೂ ಸರ್ಕಾರಕ್ಕೆ ತಪ್ಪು ಮಾಹಿತಿಯನ್ನು ನೀಡಬಾರದು & ಸರ್ಕಾರವನ್ನು ತಪ್ಪು ಹಾದಿಗೆ ಎಳೆಯಬಾರದು. ನಮ್ಮ ನಿಲುವುಗಳು, ತೀರ್ಮಾನಗಳು ಯಾವತ್ತೂ ಜನಪರವಾಗಿರಬೇಕು. ಅಧಿಕಾರಿಗಳು 30-35 ವರ್ಷಗಳ ಕಾಲ ಆಡಳಿತ ವ್ಯವಸ್ಥೆಯಲ್ಲಿದ್ದರೆ, ಜನಪ್ರತಿನಿಧಿಗಳು ಕೇವಲ 5 ವರ್ಷಗಳ ಕಾಲ ಮಾತ್ರ ಇರುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ.

• ಬಜೆಟ್ ನಲ್ಲಿ ಮಾಡಿರುವ ಘೋಷಣೆಗಳನ್ನು ಜಾರಿಗೊಳಿಸುವ ಕಾರ್ಯ ಅಧಿಕಾರಿಗಳದ್ದು. ಕಳೆದ ವರ್ಷದ ಬಜೆಟ್‌ನ 15 ಘೋಷಣೆಗಳ ಜಾರಿ ಇನ್ನೂ ಆಗಿಲ್ಲ. ಇದಕ್ಕೆ ಯಾರು ಹೊಣೆ? ಈ ವರ್ಷದ ಬಜೆಟ್‌ನಲ್ಲಿ 218 ಹೊಸ ಘೋಷಣೆಗಳು ಸೇರಿದಂತೆ ಒಟ್ಟಾರೆ 565 ಘೋಷಣೆಗಳನ್ನು ಮಾಡಿದ್ದೇವೆ. ಬಜೆಟ್‌ನ ಎಲ್ಲಾ ಘೋಷಣೆಗಳನ್ನು ಅದೇ ವರ್ಷ ಜಾರಿಗೊಳಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಬಜೆಟ್ ಘೋಷಣೆಗಳು ಯಾವುದೇ ಕಾರಣಕ್ಕೂ ಅನುಷ್ಠಾನಗೊಳ್ಳದೆ ಇರಬಾರದು. ಅನುಷ್ಠಾನದಲ್ಲಿನ ಪ್ರಾಯೋಗಿಕ ತೊಡಕುಗಳನ್ನು ನೇರವಾಗಿ ನನ್ನ ಅಥವಾ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು.

• 2026-27ನೇ ಸಾಲಿನ ಬಜೆಟ್ ನಲ್ಲಿನ ಘೋಷಣೆಗಳ ಪೈಕಿ ಕೇವಲ 5 ಘೋಷಣೆಗಳ ಬಗ್ಗೆ ಮಾತ್ರ ಸರ್ಕಾರಿ ಆದೇಶ ಮಾಡಲಾಗಿದೆ. ಮೇ ತಿಂಗಳ ಒಳಗಾಗಿ ಎಲ್ಲಾ ಸರ್ಕಾರಿ ಆದೇಶಗಳನ್ನು ಜಾರಿಗೊಳಿಸಿ, ಅನುಷ್ಠಾನ ಕಾರ್ಯ ಆರಂಭಿಸಬೇಕು ಇಲ್ಲದಿದ್ದರೆ ಆಯಾ ಕಾರ್ಯದರ್ಶಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು.

• ಅಧಿಕಾರಕ್ಕೆ ಬಂದ ಬಳಿಕ ರಾಜ್ಯಮಟ್ಟದಲ್ಲಿ ಎರಡು ಜನಸ್ಪಂದನ ಸಭೆಯಲ್ಲಿ ಸ್ವೀಕರಿಸಲಾಗಿದ್ದ 15,334 ಸ್ವೀಕೃತಿಗಳ ಪೈಕಿ 15,295 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿಯಿರುವ 45 ಅರ್ಜಿಗಳನ್ನು ವಿಲೇವಾರಿ ಮಾಡಬೇಕು.

• ಸಾರ್ವಜನಿಕ ಕುಂದುಕೊರತೆ (IPGRS)ಯಡಿ 3,27,052 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 3,17,576 ವಿಲೇವಾರಿ ಮಾಡಲಾಗಿದೆ. 1,828 ಅರ್ಜಿಗಳ ವಿಲೇವಾರಿ ನಿಗದಿತ ಕಾಲಾವಧಿ ಮುಗಿದಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡದಿದ್ದರೆ ಜನರಿಗೆ ಸರ್ಕಾರದ ಮೇಲಿನ ನಂಬಿಕೆಯೇ ಹೊರಟು ಹೋಗುತ್ತದೆ. ಇದಕ್ಕೆ ಅವಕಾಶ ಮಾಡಬಾರದು. ಇದೇ ರೀತಿ ಸಕಾಲ ಅಡಿ ಸ್ವೀಕರಿಸಲಾಗುವ ಅರ್ಜಿಗಳನ್ನು ಸಹ ಸಕಾಲದಲ್ಲಿಯೇ ವಿಲೇವಾರಿ ಮಾಡಬೇಕು.

• ನೇಮಕಾತಿಗೆ ಮಂಜೂರಾತಿ ನೀಡಲಾಗಿರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಆರ್ಥಿಕ ಇಲಾಖೆಯಿಂದ 24,300 ಹುದ್ದೆಗಳ ಭರ್ತಿಗೆ ಮಂಜೂರಾತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ ವೃಂದದಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗದೇ ಬಾಕಿಯಿರುವ 32,132 ಹುದ್ದೆಗಳಿವೆ. ಕೆಲವು ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿ ಪರಿಷ್ಕರಣೆ ಬಾಕಿಯಿದ್ದು, ಇದನ್ನು ಆದಷ್ಟು ಬೇಗನೆ ಮುಗಿಸಬೇಕು.

• ವಿವಿಧ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಡಿ 2025-26 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ರೂ. 22,768 ಕೋಟಿ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ರೂ.16,729 ಕೋಟಿ ಬಿಡುಗಡೆ ಮಾಡಿದೆ. ಕೇಂದ್ರದಿಂದ ರೂ.11,367 ಕೋಟಿ ಅನುದಾನ ಬಿಡುಗಡೆಗೆ ಬಾಕಿಯಿದೆ. ಈ ಅವಧಿಯಲ್ಲಿ ಒಟ್ಟಾರೆ ರೂ.42,222 ಕೋಟಿ ಲಭ್ಯ ಅನುದಾನವಿದ್ದು, ರೂ.38,236 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಖರ್ಚು ಮಾಡಲು ಕ್ರಮ ಕೈಗೊಳ್ಳಬೇಕು.

• ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ರೂ.2 ಕೋಟಿ ವರೆಗೆ ಮೀಸಲಾತಿ ಕಲ್ಪಿಸಲಾಗಿದೆ. ವಿವಿಧ ಕಾಮಗಾರಿಗಳನ್ನು ಒಟ್ಟು ಸೇರಿಸಿ ಪ್ಯಾಕೇಜ್ ಮಾಡುವ ಮೂಲಕ ಮೀಸಲಾತಿ ತಪ್ಪಿಸಲು ಅವಕಾಶ ನೀಡಬಾರದು. ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬದಿಂದ ನಿರ್ಮಾಣ ವೆಚ್ಚ ಹೆಚ್ಚಳಕ್ಕೆ ಅವಕಾಶ ಮಾಡಬಾರದು.

• ಈ ವರ್ಷ ಮಳೆ ಶೇ.5ರಷ್ಟು ಮಳೆ ಕಡಿಮೆಯಾಗುವ ಸಾಧ್ಯತೆಯಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ನಿರಂತರ ನಿಗಾ ವಹಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಭೆ ನಡೆಸಬೇಕು. ತಮ್ಮ ಉಸ್ತುವಾರಿಯಲ್ಲಿನ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವುದು ಆಯಾ ಕಾರ್ಯದರ್ಶಿಗಳ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದು.

• ಅಧಿಕಾರಿಗಳು ರಾಜಕಾರಣಿಗಳ ಓಲೈಕೆ ಮಾಡಲು ಹೋಗಬಾರದು, ಇದು ಸರ್ವಾಧಿಕಾರಕ್ಕೆ ಹಾದಿ ಮಾಡುತ್ತದೆʼ ಎಂದು ಅಂಬೇಡ್ಕರ್ ಅವರು ಎಚ್ಚರಿಕೆ ನೀಡಿದ್ದರು. ಅದರಂತೆ ನೀವು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ. ಸಚಿವರಿಗೆ ಕಾನೂನಿನ ವ್ಯಾಪ್ತಿಯೊಳಗೆ ಸಲಹೆಗಳನ್ನು ನೀಡಿ. ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದು ಕಾರ್ಯದರ್ಶಿಗಳ ಕಾರ್ಯ ಚಟುವಟಿಕೆಗಳ ಮೇಲೆ ಅವಲಂಬಿತವಾಗಿದೆ. ಆಡಳಿತವು ಇನ್ನಷ್ಟು ಚುರುಕುಗೊಳ್ಳಬೇಕು.

ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳ ಸಭೆ ನಡೆಸಿ, ಹಲವು ಮಹತ್ವದ ಸೂಚನೆಗಳನ್ನು ನೀಡಿದೆ.
ಮುಖ್ಯಾಂಶಗಳು ಹೀಗಿವೆ:

• ರಾಜ್ಯದ ಆಡಳಿತ ಸಮರ್ಪಕವಾಗಿ ನಡೆಯಲು ಇಲಾಖಾ ಕಾರ್ಯದರ್ಶಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ. ಸಂವಿಧಾನದ… pic.twitter.com/CRvFOo4wBW

— Siddaramaiah (@siddaramaiah) May 2, 2026

End of May deadline for implementing budget announcements in the state: CM Siddaramaiah issues stern warning to officials
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ನಿಮ್ಮ ಮೊಬೈಲ್ ಗೆ ಬರಲಿದೆ `ಆಸ್ತಿ ದಾಖಲೆ’ಗಳು.!

03/05/2026 5:42 AM1 Min Read

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM1 Min Read

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM1 Min Read
Recent News

ಇಂದು ದೇಶಾದ್ಯಂತ `NEET UG’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | NEET UG Exam 2026

03/05/2026 5:49 AM

ರಾಜ್ಯದಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಮೇ ಅಂತ್ಯದ ಗಡುವು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

03/05/2026 5:47 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ನಿಮ್ಮ ಮೊಬೈಲ್ ಗೆ ಬರಲಿದೆ `ಆಸ್ತಿ ದಾಖಲೆ’ಗಳು.!

03/05/2026 5:42 AM

BREAKING: ಬಂಗಾಳ ಚುನಾವಣೆದ ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲೂ ಮರುಮತದಾನಕ್ಕೆ ಆಯೋಗದ ಆದೇಶ

02/05/2026 10:29 PM
State News
KARNATAKA

ರಾಜ್ಯದಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಮೇ ಅಂತ್ಯದ ಗಡುವು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

By kannadanewsnow5703/05/2026 5:47 AM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾದ ಎಲ್ಲಾ ಯೋಜನೆಗಳು ಮೇ ತಿಂಗಳ ಒಳಗಾಗಿ ಕಡ್ಡಾಯವಾಗಿ ಜಾರಿಗೆ ಬರಬೇಕು…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ನಿಮ್ಮ ಮೊಬೈಲ್ ಗೆ ಬರಲಿದೆ `ಆಸ್ತಿ ದಾಖಲೆ’ಗಳು.!

03/05/2026 5:42 AM

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.