Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧೂಮಪಾನಿಗಳಿಗೆ ಬಿಗ್ ಶಾಕ್ ; ಹೊಸ ಅಬಕಾರಿ ಸುಂಕ ಜಾರಿ, ಸಿಗರೇಟ್ ಬೆಲೆ ಪ್ಯಾಕ್’ಗೆ 55 ರೂಪಾಯಿ ಏರಿಕೆ!

02/02/2026 6:13 PM

BREAKING : ವಿನ್ಜೊ ಸೇರಿ ಇತರ ವ್ಯಾಪಾರಿಗಳ ವಿರುದ್ಧದ ಹಣ ವರ್ಗಾವಣೆ ಪ್ರಕರಣ ; ‘ಫೋನ್ ಪೇ’ಗೆ ‘ED’ ಸಮನ್ಸ್!

02/02/2026 5:25 PM

ಹೊಸ ‘ಲಗೇಜ್ ನಿಯಮ’ಗಳ ಅಡಿಯಲ್ಲಿ ನೀವು ವಿದೇಶದಿಂದ ಎಷ್ಟು ‘ಚಿನ್ನಾಭರಣ’ ಸುಂಕ ರಹಿತವಾಗಿ ತರಬಹುದು ಗೊತ್ತಾ.?

02/02/2026 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇರಳದಲ್ಲಿ CM, DCM ವಿರುದ್ಧ ಶತ್ರು ನಾಶ ಯಾಗ; ತನಿಖೆಗೆ ‘SIT’ ರಚಿಸಿ ಎಂದು ಸರಕಾರಕ್ಕೆ ‘HDK ಟಾಂಗ್’
KARNATAKA

ಕೇರಳದಲ್ಲಿ CM, DCM ವಿರುದ್ಧ ಶತ್ರು ನಾಶ ಯಾಗ; ತನಿಖೆಗೆ ‘SIT’ ರಚಿಸಿ ಎಂದು ಸರಕಾರಕ್ಕೆ ‘HDK ಟಾಂಗ್’

By kannadanewsnow0903/06/2024 4:41 PM

ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಇದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ನೀಡಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಅವರು ಹೇಳಿದರು.

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು

ಡಿಸಿಎಂ ಅವರು ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ ಕಟ್ಟಿದ್ದಾರೆ. ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ಮಾತನ್ನು ಹೇಳಲು ಬಯಸುತ್ತೇನೆ. ‘ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು.’ ಎಂದು. ದಾಸಶ್ರೇಷ್ಠ ಪುರಂದರದಾಸರು ರಚಿಸಿರುವ ಪದವಿದು. ಅವರು ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು. ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ ಎಂದು ಅವರು ಟೀಕಿಸಿದರು.

ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ

‘ಲೋಕದ ಡೊಂಕ ನೀವೇಕೆ ತಿದ್ದುವಿರಿ..’ ಎಂದು ಈ ಹಿಂದೆ ಡಿಕೆಶಿ ಹೇಳಿದ್ದ ವಚನವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟ ಕುಮಾರಸ್ವಾಮಿ ಅವರು; ನಾನು ಅವರ ಮಾತನ್ನು ಅವರಿಗೇ ಹೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ. ಅದೆಂತದೋ ಶತ್ರು ಭೈರವಿ ಯಾಗವಂತೆ. ಅವರಿಗೆ ಭಕ್ತಿ ಇದೆಯಂತೆ. ಪವಿತ್ರ ಪುಣ್ಯಕ್ಷೇತ್ರ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ. ಅವರಿಗೆ ಈ ಯಾಗದ ಬಗ್ಗೆ ಪೂರ್ಣ ಮಾಹಿತಿ ಇರಬೇಕು. ಅಲ್ಲಿ ಯಾವ ರೀತಿಯ ಪೂಜೆ ನಡೆಯುತ್ತದೆ? ಆ ಕ್ಷೇತ್ರ ಮಹಿಮೆ ಏನು ಎನ್ನುವುದು ಅವರಿಗೆ ತಿಳಿದಿರುತ್ತದೆ ಅಲ್ಲವೇ? ಹಾಗಿದ್ದರೂ ಅವರು ಸುಳ್ಳು ಹೇಳಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ ಎಸಗಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಕುಟುಂಬದ ಕೋಣ, ಮೇಕೆ ಕಡಿಯಲ್ಲ

ಅವರು ನಮ್ಮ ಕುಟುಂಬದ ಮೇಲೆ ಏನೆಲ್ಲಾ ಚಿತಾವಣೆ ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ನಮ್ಮ ಕುಟುಂಬದಲ್ಲಿ ಕುರಿ, ಮೇಕೆ, ಎಮ್ಮೆ, ಕೋಣ ಕಡಿಯೋದು ಯಾವತ್ತೂ ನಡೆದಿಲ್ಲ. ಅಂತಹ ಸಂಪ್ರದಾಯ ನಮ್ಮ ಕುಟುಂಬದಲ್ಲಿ ಇಲ್ಲ. ಪ್ರತಿ ತಿಂಗಳು ನಾನು ಜೆಪಿ ನಗರದಲ್ಲಿರುವ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸುತ್ತೇನೆ. ನಮ್ಮ ತಂದೆಯವರು ಪೂಜೆ ಮಾಡಿಸುತ್ತಾರೆ. ನಮ್ಮಿಬ್ಬರ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಪೂಜೆ ಮಾಡಿ ದೈವಕ್ಕೆ ಪ್ರಾರ್ಥನೆ ಸಲ್ಲಿಸುತ್ತೇವೆ. ಇನ್ನೊಬ್ಬರಿಗೆ ಕೇಡು ಬಯಿಸಲು ಪೂಜೆ ಮಾಡಿಲ್ಲ, ಮಾಡುವುದೂ ಇಲ್ಲ ಎಂದರು ಕುಮಾರಸ್ವಾಮಿ ಅವರು.

ಕೋಣ, ಹಂದಿ ಕೂಯ್ದು ಕೇಡು ಬಯಸಲ್ಲ ನಾವು, ಕೇಡು ಬಯಸೋದು ಅವರ ಸಂಸ್ಕೃತಿ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ ಅವರು; ದೇವೇಗೌಡರ ಅರವತ್ತು ವರ್ಷಗಳ ರಾಜಕೀಯ ಜೀವನದಲ್ಲಿ 3-4 ವರ್ಷ ಬಿಟ್ಟರೆ ಉಳಿದದ್ದು ಎಲ್ಲಾ ವಿರೋಧ ಪಕ್ಷದಲ್ಲೇ. ಒಂದು ವೇಳೆ ಕುರಿ, ಕೋಣ ಬಲಿ ಕೊಟ್ಟರೆ ಅಧಿಕಾರ ಸಿಗುತ್ತದೆ ಎನ್ನುವುದಾದರೆ ಇಷ್ಟೆಲ್ಲಾ ಕಷ್ಟ ಏನಕ್ಕೆ ಪಡಬೇಕು ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

BIG NEWS: ‘ರಾಜ್ಯ ಸರ್ಕಾರಿ ನೌಕರರ ಸಂಘ’ದ ಚುನಾವಣೆಗೆ ಮುಹೂರ್ತ ಫಿಕ್ಸ್: ‘ಕರಡು ಮತದಾರರ ಪಟ್ಟಿ’ ಸಿದ್ಧತೆಗೆ ಆದೇಶ

ಕಾರ್ಮಿಕರೇ ಗಮನಿಸಿ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!

Share. Facebook Twitter LinkedIn WhatsApp Email

Related Posts

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

02/02/2026 4:16 PM2 Mins Read

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

02/02/2026 3:56 PM3 Mins Read

ಬೆಂಗಳೂರಲ್ಲಿ ಕ್ಲಾಸಿಕ್ ಲೆಜೆಂಡ್ಸ್ ರಾಷ್ಟ್ರೀಯ ತರಬೇತಿ ಕೇಂದ್ರ ಉದ್ಘಾಟನೆ

02/02/2026 3:51 PM1 Min Read
Recent News

ಧೂಮಪಾನಿಗಳಿಗೆ ಬಿಗ್ ಶಾಕ್ ; ಹೊಸ ಅಬಕಾರಿ ಸುಂಕ ಜಾರಿ, ಸಿಗರೇಟ್ ಬೆಲೆ ಪ್ಯಾಕ್’ಗೆ 55 ರೂಪಾಯಿ ಏರಿಕೆ!

02/02/2026 6:13 PM

BREAKING : ವಿನ್ಜೊ ಸೇರಿ ಇತರ ವ್ಯಾಪಾರಿಗಳ ವಿರುದ್ಧದ ಹಣ ವರ್ಗಾವಣೆ ಪ್ರಕರಣ ; ‘ಫೋನ್ ಪೇ’ಗೆ ‘ED’ ಸಮನ್ಸ್!

02/02/2026 5:25 PM

ಹೊಸ ‘ಲಗೇಜ್ ನಿಯಮ’ಗಳ ಅಡಿಯಲ್ಲಿ ನೀವು ವಿದೇಶದಿಂದ ಎಷ್ಟು ‘ಚಿನ್ನಾಭರಣ’ ಸುಂಕ ರಹಿತವಾಗಿ ತರಬಹುದು ಗೊತ್ತಾ.?

02/02/2026 5:08 PM

ಎದ್ದು ನಿಂತು ಕೂಡಲೆ ತಲೆ ತಿರುಗಿದಂತೆ ಅನಿಸ್ತಿದ್ಯಾ.? ಇದು ಯಾವ ರೋಗದ ಲಕ್ಷಣ ಗೊತ್ತಾ.?

02/02/2026 4:57 PM
State News
KARNATAKA

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

By kannadanewsnow0902/02/2026 4:16 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಉಳ್ಳೂರು ಬಳಿಯಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಾಗರದ ಅಕ್ಷಯ…

ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ

02/02/2026 3:56 PM

ಬೆಂಗಳೂರಲ್ಲಿ ಕ್ಲಾಸಿಕ್ ಲೆಜೆಂಡ್ಸ್ ರಾಷ್ಟ್ರೀಯ ತರಬೇತಿ ಕೇಂದ್ರ ಉದ್ಘಾಟನೆ

02/02/2026 3:51 PM

BREAKING: ಬೆಂಗಳೂರಲ್ಲಿ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

02/02/2026 3:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.