ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Karnataka Chief Minister Siddaramaiah ) ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಸೆ.30ರಂದು ಪ್ರಕರಣ ದಾಖಲಿಸಿದೆ.
ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲು ಫೆಡರಲ್ ಏಜೆನ್ಸಿ ಜಾರಿ ಪ್ರಕರಣ ಮಾಹಿತಿ ವರದಿ (Enforcement Case Information Report- ECIR) ಸಲ್ಲಿಸಿದೆ ಎಂದು ವರದಿ ತಿಳಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysuru Urban Development Authority- MUDA ) ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್.27ರಂದು ಎಫ್ ಐಆರ್ ದಾಖಲಿಸಿದ್ದರು.
ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಸಿದ್ದರಾಮಯ್ಯ ಅವರನ್ನು ಎ1 ಆರೋಪಿ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರನ್ನು ಎ2, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಎ3 ಮತ್ತು ದೇವರಾಜು ಅವರನ್ನು ಎ4 ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 25 ರಂದು ಆದೇಶಿಸಿತ್ತು.
ಈ ಪ್ರಕರಣದಲ್ಲಿ, ಮುಡಾ ಸ್ವಾಧೀನಪಡಿಸಿಕೊಂಡ ಭೂಮಿಗೆ ಹೋಲಿಸಿದರೆ ಮೈಸೂರಿನ ಮಾರುಕಟ್ಟೆ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ನಿವೇಶನಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಈಗ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲದಯ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row
BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ದುರ್ಮರಣ!