ಮೈಸೂರು : ವಿದ್ಯುತ್ ಅವಘಡದಲ್ಲಿ ಗಾಯಗೊಂಡಿದ್ದ ಇಂಜಿನಿಯರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಇಂಜಿನಿಯರ್ ಆನಂದ್ (43) ಸಾವನ್ನಪ್ಪಿದ್ದರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಇ ಆಗಿರುವ ಆನಂದ್ ಹುಣಸೂರು ಪಟ್ಟಣದ KPTCL ವಿದ್ಯುತ್ ಕೇಂದ್ರದಲ್ಲಿ ಎಇ ಆಗಿ ಕೆಲಸ ಮಾಡುತ್ತಿದ್ದರು. ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಆನಂದ್ ಗಾಯಗೊಂಡಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನಂದ್ ಸಾವನ್ನಪ್ಪಿದ್ದಾರೆ. ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








