ಬೆಂಗಳೂರು: 2024-25ನೇ ಸಾಲಿಗೆ ಎಂಜಿನಿಯರಿಂಗ್ ಮತ್ತು ವಾಸ್ತುಶಿಲ್ಪ ಕಾಲೇಜುಗಳ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇ 10ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕುಪೆಕಾ) ಮತ್ತು ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (ಕೆಪಿಸಿಎಫ್) ಪ್ರತಿನಿಧಿಗಳೊಂದಿಗೆ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಿದರು. ಉನ್ನತ ಶಿಕ್ಷಣ ಇಲಾಖೆ ಶೀಘ್ರದಲ್ಲೇ ಪರಿಷ್ಕೃತ ಶುಲ್ಕ ರಚನೆಯನ್ನು ಬಿಡುಗಡೆ ಮಾಡಲಿದೆ.
ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕಕ್ಕೆ ಸಂಬಂಧಿಸಿದಂತೆ, ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳೊಂದಿಗೆ ಇನ್ನೂ ಎರಡು ಸಭೆಗಳನ್ನು ನಡೆಸಿದ ನಂತರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ