ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಲ್ಲಿ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ರಾಹುಲ್ (೨೧) ಕಾಲೇಜು ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಂಧ್ರಪ್ರದೇಶದ ಕರ್ನೂಲ್ ಮೂಲದ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿಯಾಗಿದ್ದು, ಕೆಲ ವರ್ಷಗಳಿಂದ ಬಳ್ಳಾರಿಯಲ್ಲಿ ಕುಟುಂಬ ವಾಸವಾಗಿತ್ತು. ನಿನ್ನೆ ಪರೀಕ್ಷೆಗೆ ತಡವಾಗಿ ಬಂದಿದ್ದ ವೇಳೆ ಕಾಲೇಜಿನಲ್ಲಿ ನಿಂದಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.








