ಬೆಂಗಳೂರು: ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸೋದಕ್ಕೆ ಸರ್ಕಾರ ಅನುಮತಿ ನೀಡಿ ಆದೇಶಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿರುವ ಮತ್ತು ಅವಶ್ಯಕತೆ ಇರುವ ರಾಜ್ಯದ ಒಟ್ಟು 208 ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪುಸ್ತುತ ಇರುವ ಮಾಧ್ಯಮದ ಜೊತೆಗೆ 2025-26ನೇ ಸಾಲಿನಿಂದ ದ್ವಿಭಾಷಾ ಮಾಧ್ಯಮ(Bilingual) (ಆಂಗ್ಲ ಮಾಧ್ಯಮ) ತರಗತಿಗಳನ್ನು ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗದಂತೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಅನುಮೋದನೆ ಕೋರಿರುತ್ತಾರೆ ಎಂದಿದ್ದಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿನ ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪುಸ್ತುತ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) (Bilingual) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.
BREAKING: ನಾಳೆ ಮಧ್ಯಾಹ್ನ 1.30ಕ್ಕೆ ಕರ್ನಾಟಕ ದ್ವಿತೀಯ PUC ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ
BREAKING: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿ ಹೆಚ್ಚಿಸಿದ ಕೇಂದ್ರ ಸರ್ಕಾರ