ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರು ಬೀಜ, ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು.
ತಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಬೀಜ, ಗೊಬ್ಬರದ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಿ ಎಂದು ಸಿಎಂ ತಿಳಿಸಿದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ
BREAKING: ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’