Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ವಿಧಾನಸಭಾ ಚುನಾವಣೆ: ಮಾದರಿ ಚುನಾವಣಾ ನೀತಿ ಸಂಹಿತೆ ಅಂದ್ರೆ ಏನು? ಇಲ್ಲಿದೆ ಮಾಹಿತಿ

15/03/2026 7:30 PM

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಚಿವ ಬಂಗಾರಪ್ಪ ಸೂಚನೆ
KARNATAKA

ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಚಿವ ಬಂಗಾರಪ್ಪ ಸೂಚನೆ

By kannadanewsnow0505/02/2025 8:04 PM

ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.

ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

SSLC ಫಲಿತಾಂಶ ಉತ್ತಮವಾಗಿರುವಂತೆ ಸೂಚನೆ

ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಪರೀಕ್ಷೆಗಳನ್ನು ನಿಯಮಾನಸಾರ ಕಟ್ನೆಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನುತಿರಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.

ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು hಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಸಚಿವರು ಸಾರ್ವಜನಿಕರಿಂದ ಅಹ್ ಅಹವಾಲುಗಳನ್ನು ಸ್ವೀಕರಿಸಿದರು.

Share. Facebook Twitter LinkedIn WhatsApp Email

Related Posts

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM1 Min Read

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM1 Min Read

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM1 Min Read
Recent News

2026ರ ವಿಧಾನಸಭಾ ಚುನಾವಣೆ: ಮಾದರಿ ಚುನಾವಣಾ ನೀತಿ ಸಂಹಿತೆ ಅಂದ್ರೆ ಏನು? ಇಲ್ಲಿದೆ ಮಾಹಿತಿ

15/03/2026 7:30 PM

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM
State News
KARNATAKA

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

By kannadanewsnow0915/03/2026 7:01 PM KARNATAKA 1 Min Read

ಹುಸ್ಕೂರು: ಮದ್ದೂರಮ್ಮ ಪಾರ್ವತಿ ದೇವಿಉ ಸ್ವರೂಪಿ. ದುಃಖವನ್ನು ದೂರ ಮಾಡುವ ದೇವತೆ ಎಲ್ಲರ ದುಃಖಗಳನ್ನು ದೂರ ಮಾಡಲಿ. ಎಲ್ಲರಿಗೂ ಒಳ್ಳೆಯದಾಗಲಿ.…

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.