ಬೆಂಗಳೂರು : : ಇಂದು ಕೋವಿಡ್ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ. ಈ ಬೆನ್ನಲ್ಲೆ ಥಿಯೇಟರ್ಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ನಟ ಡಾ.ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ನಟ ಡಾ.ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾ ತೆರೆಕಾಣುತ್ತಿದೆ. ಈ ನಿಟ್ಟನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು , ಈಗಾಗಲೇ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ನೋಡಲು ಬರುವವರು ಮಾಸ್ಕ್ ಇದ್ದರಷ್ಟೇ ಬನ್ನಿ. ಮಾಸ್ಕ್ ಹಾಕಿಕೊಂಡು ಬಂದು ಒಳ್ಳೆಯ ಸಿನಿಮಾವನ್ನು ಮಿಸ್ ಮಾಡದೆ ನೋಡಿ. ಮಾಸ್ಕ್ ಹಾಕೋದ್ರಿಂದ ನಿಮ್ಮ ಆರೋಗ್ಯವನ್ನು ಸೋಂಕಿನಿಂದ ರಕ್ಷಿಸಬಹುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ