ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಹಿನ್ನೆಲೆ ಇಂದು ಅರಮನೆಯಲ್ಲಿ ಸಿಂಹಾಸನಗಳನ್ನು ಒಳಾಂಗಣದಲ್ಲಿ ಜೋಡಣೆ ಕಾರ್ಯ ನಡೆಸಲಾಗುತ್ತಿದೆ.
BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು | D.K.Shivakumar
ನವರಾತ್ರಿ ವೇಳೆ ಸಿಂಹಾಸನದ ಮೇಲೆ ಕೂತು ದರ್ಬಾರ್ ನಡೆಸುತ್ತಾರೆ. ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಾಂಪ್ರದಾಯಿಕವಾಗಿ ರಾಜವಂಶಸ್ಥರ ಸಮ್ಮುಖದಲ್ಲಿ ಸಿಂಹಾಸನ ಜೋಡಣೆ ಕಾರ್ಯನಡೆಯುತ್ತದೆ. ಇಂದು ಬೆಳಗ್ಗೆ10ರಿಂದ ಮಧ್ಯಾಹ್ನ 1ಗಂಟೆಯವರೆಗೆ ಅರಮನೆ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗುವುದು.
BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು | D.K.Shivakumar
ಮೈಸೂರು ದಸರಾ ಪ್ರವಾಸಿಗರ ಗಮನಕ್ಕೆ :
ಇನ್ನೂ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ, ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆ ಆರ್ ಎಸ್ ಬೃಂದಾವನಕ್ಕೆ ತೆರಳಬಹುದು. ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ, 5 ಸ್ಥಳಗಳಲ್ಲಿ ಟಿಕೆಟ್ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ.
BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು | D.K.Shivakumar
ಏಕೀಕೃತ ಟಿಕೆಟ್ ವ್ಯವಸ್ಥೆಯು 2022ರ ಸೆಪ್ಟಂಬರ್ 20ರಂದು ಆರಂಭಗೊಂಡು, ಅಕ್ಟೋಬರ್ 05ರ ವರೆಗೆ ಚಾಲ್ತಿಯಲ್ಲಿರುತ್ತದೆ. ಒಂದು ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ ಟಿಕೆಟ್ ದರವನ್ನು 250 ರೂ.ಗಳಿಗೆ ನಿಗದಿಪಡಿಸಲಾಗಿದೆ.
BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು | D.K.Shivakumar
ಏಕೀಕೃತ ಟಿಕೆಟ್ನನ್ನು ಪ್ರವಾಸಿ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುತ್ತಿದೆ. ಕೆಎಸ್ಟಿಡಿಇ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆ ಎಸ್ಆರ್ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 02 ಕಡೆ, ಚಾ.ಬೆಟ್ಟ, ಮೃಗಾಲಯ, ಕೆಆರ್ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್ಗಳಲ್ಲಿ ಟಿಕೆಟ್ ಲಭ್ಯವಿರಲಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ದಿಢೀರ್ ಏರುಪೇರು | D.K.Shivakumar