ಬೆಂಗಳೂರು: ಇಡೀ ಸಚಿವ ಸಂಪುಟ ಸಭೆ ರಾಜ್ಯಪಾಲರ ನಿರ್ಧಾರವನ್ನು ಖಂಡನೆ, ಸಿಎಂ ಬೆಂಬಲಕ್ಕೆ ನಿಲ್ಲಲು ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವುದಿಲ್ಲ. ನೀಡದಂತೆ ಅವರ ಬೆಂಬಲಕ್ಕೆ ಇಡೀ ಸಂಪುಟ ಸಭೆ ನಿಂತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇಂದು ತುರ್ತು ಸಚಿವ ಸಂಪುಟ ಸಭೆಯನ್ನು ನಡೆಸಲಾಯಿತು. ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಖಂಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿ ಈ ಅನುಮತಿಯನ್ನು ನೀಡಲಾಗಿದೆ ಎಂದರು.
ಇಡೀ ಕ್ಯಾಬಿನೇಟ್ ಮತ್ತು ಪಕ್ಷ ಎರಡು ಸೇರಿ ನಾವೆಲ್ಲ ಒಗ್ಗಟ್ಟಿನಿಂದ ಕರ್ನಾಟಕ ಮುಖ್ಯಮಂತ್ರಿ ಪರವಾಗಿ ಇದ್ದೇವೆ. ನಾವು ಯಾವ ಕಾರಣಕ್ಕೂ, ಯಾವುದೇ ಒತ್ತಡಕ್ಕೆ ಮಣಿದು ರಾಜೀನಾಮೆಯನ್ನು ಕೊಡುವ ಸಂದರ್ಭವಿಲ್ಲ. ಎಐಸಿಸಿಯ ಹೈಕಮಾಂಡ್ ನಿಂದ ಹಿಡಿದು ಕೆಳ ಹಂತದ ಕಾರ್ಯಕರ್ತರು ಕೂಡ ಇದೇ ನಿರ್ಧಾರವನ್ನು ಹೊಂದಿದ್ದಾರೆ ಎಂದರು.
ಫಾಕ್ಸ್ ಕಾನ್ ನಿಂದ ರಾಜ್ಯದಲ್ಲಿ 2ನೇ ಬೃಹತ್ iPhone ತಯಾರಿಕಾ ಘಟಕ ಆರಂಭ: 40 ಸಾವಿರ ಉದ್ಯೋಗ ಸೃಷ್ಠಿ