ಚಿತ್ರದುರ್ಗ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 06 ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆ ಫೆ. 15 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದರು.
ವಸತಿ ಶಾಲೆಗಳಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ 06 ನೇ ತರಗತಿ ದಾಖಲಿಗೆ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿ ರನ್ನ, ಗಾಂಧಿ ತತ್ವ, ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 06 ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಫೆ. 15 ರಂದು ಮಧ್ಯಾಹ್ನ 02.30 ರಿಂದ ಸಂಜೆ 04.30 ರವರೆಗೆ ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಒಟ್ಟು 7317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತ ರೀತಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ, ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ವೇಳೆಯೊಳಗೆ ಆಯಾ ಮಾರ್ಗಾಧಿಕಾರಿಗಳು ಪ್ರಶ್ನೆಪತ್ರಿಕೆಯನ್ನು ತಲುಪಿಸಬೇಕು. ಪರೀಕ್ಷೆ ಬಳಿಕ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ನಿಗದಿತ ಸ್ಥಳಕ್ಕೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಬೇಕು. ಈಗಾಗಲೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಇಲಾಖೆಯವರು ಪರೀಕ್ಷಾ ದಿನದಂದು ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆಯನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಪುಟ್ಟಸ್ವಾಮಿ ಅವರು ಪ್ರವೇಶ ಪರೀಕ್ಷೆ ಕುರಿತು ಮಾಹಿತಿ ನೀಡಿ, ಪ್ರವೇಶ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, 7317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 05 ಪರೀಕ್ಷಾ ಕೇಂದ್ರಗಳಲ್ಲಿ 1919 ವಿದ್ಯಾರ್ಥಿಗಳು. ಚಿತ್ರದುರ್ಗ ತಾಲ್ಲೂಕಿನ 02 ಕೇಂದ್ರಗಳಲ್ಲಿ 915 ವಿದ್ಯಾರ್ಥಿಗಳು, ಹಿರಿಯೂರಿನ 03 ಕೇಂದ್ರಗಳಲ್ಲಿ 1341 ವಿದ್ಯಾರ್ಥಿಗಳು, ಹೊಳಲ್ಕೆರೆಯ 02 ಕೇಂದ್ರಗಳಲ್ಲಿ 591 ವಿದ್ಯಾರ್ಥಿಗಳು, ಹೊಸದುರ್ಗದ 04 ಕೇಂದ್ರಗಳಲ್ಲಿ 1297 ವಿದ್ಯಾರ್ಥಿಗಳು ಹಾಗೂ ಮೊಳಕಾಲ್ಮೂರು ತಾಲ್ಲೂಕಿನ 04 ಪರೀಕ್ಷಾ ಕೇಂದ್ರಗಳಲ್ಲಿ 1254 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಸ್ವೀಕರಿಸಲು ಈಗಾಗಲೆ 21 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ವೈರ್‍ಲೆಸ್ ಸೆಟ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸಿಲ್ದಾರರು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಉಪನ್ಯಾಸಕರು, ಪ್ರಾಂಶುಪಾಲರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜರ್ಮನಿಯ ಮ್ಯೂನಿಚ್‌ನಲ್ಲಿ ಜನಸಮೂಹದ ಮೇಲೆ ನುಗ್ಗಿದ ಕಾರು: 28 ಮಂದಿಗೆ ಗಾಯ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







