ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 90 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 4 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ 29 ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 6ನೇ ತರಗತಿ ದಾಖಲಾತಿಗೆ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲಾಗಿರುತ್ತದೆ.
2024-25ನೇ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ (ಆಂಗ್ಲ ಮಾಧ್ಯಮ) ಶಾಲೆಗಳು, ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿಬಿ.ಎಸ್.ಇ) ಶಾಳೆಯ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೇ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.
ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಅಥವಾ ಅಲ್ಪಸಂಖ್ಯಾತರ ತಾಲ್ಲೂಕು / ಜಿಲ್ಲಾ ಮಾಹಿತಿ ಕೇಂದ್ರಗಳನ್ನು ಸಂಪರ್ಕಿ ಪ್ರವೇಶ ಪತ್ರಗಳನ್ನು ಪಡೆದು ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಅಥವಾ 080-22535900ಕ್ಕೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.