ಶಿವಮೊಗ್ಗ: ನಾಳೆಯಿಂದ ಸೊರಬ ತಾಲ್ಲೂಕಿನ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. ಈ ಜಾತ್ರಾ ಮಹೋತ್ಸವಕ್ಕೆ ಆಗಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ ಅವರು ಆಹ್ವಾನಿಸಿದರು.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಜಾತ್ರೆ ಜಿಲ್ಲೆಯಷ್ಟೇ ಅಲ್ಲದೇ ಹೊರ ಜಿಲ್ಲೆಯಲ್ಲೂ ಪ್ರಸಿದ್ಧಿಯಾದಂತದ್ದು. ಇಂತಹ ಜಾತ್ರೆ ಮಾರ್ಚ್.5ರ ನಾಳೆಯಿಂದ, ಮಾರ್ಚ್.10ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈಗಾಗಲೇ ತಾಲ್ಲೂಕು ಆಡಳಿತದಿಂದ ನಾಳೆಯ ಜಾತ್ರೆಗೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದ್ದು, ಅಂತಿಮ ಸಿದ್ಧತಾ ಕಾರ್ಯ ನಡೆಯುತ್ತಿದೆ.
ಈ ಚಂದ್ರಗುತ್ತಿಯ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರನ್ನು ಭೇಟಿಯಾಗಿ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ ಅವರು ಆಮಂತ್ರಿಸಿದರು.
ಚಂದ್ರಗುತ್ತಿ ಶ್ರೀ ರೇಣುಕಮ್ಮ ದೇವಿ ಜಾತ್ರೆ: ಬೆತ್ತಲೆ ಸೇವೆ ನಿಷೇಧ, ಪೂಜಾ ವಿಧಿ-ವಿಧಾನಗಳಿಗೆ ಅನುಮತಿ
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ 05 ರಿಂದ 10 ರವರೆಗೆ ನಡೆಯಲಿದ್ದು, ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು “ಬೆತ್ತಲೆ ಸೇವೆ”ಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರು ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾಜ್ಞೆಯು ಶ್ರೀರೇಣುಕಮ್ಮ ದೇವಿಯ ರಥೋತ್ಸವ ಹಾಗೂ ಇತರೆ ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ: ಆರೋಪಿ ‘ಕ್ರಿಶ್ಚಿಯನ್ ಮೈಕೆಲ್’ಗೆ ಜಾಮೀನು ಮಂಜೂರು
BREAKING: ಚಿನ್ನ ಕಳ್ಳ ಸಾಗಾಣಿಕೆ ಕೇಸ್: ಮಾ.18ರವರೆಗೆ ‘ನಟಿ ರನ್ಯಾ ರಾವ್’ಗೆ ನ್ಯಾಯಾಂಗ ಬಂಧನ