ಬೆಂಗಳೂರು: ನಗರದಲ್ಲಿ ಬಹುದೊಡ್ಡ ಹಗರಣ ಎನ್ನುವಂತೆ ಇಪಿಎಫ್ಓ ಸ್ಟಾಫ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಸಿಇಓ ಗೋಪಿ, ಅಕೌಟೆಂಟ್ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮುರಳಿ ಎಂಬುವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಿಇಒ ಗೋಪಿ ಮತ್ತು ಅಕೌಂಟೆಂಟ್ ಜಗದೀಶ್ ಎಂಬುವರ ವಿರುದ್ಧ ಕೇಸ್ ದಾಖಲಾಗಿದೆ.
ಎಫ್ಐಆರ್ ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ. ಮುರುಳಿ ಎಂಬುವರು ನೀಡಿರುವಂತ ದೂರಿನಲ್ಲಿ ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 70 ಕೋಟಿ ಅವ್ಯವಹಾರ ಆಗಿದೆ ಎಂಬುದಾಗಿ ಉಲ್ಲೇಖಿಸಿದ್ದಾರೆ.
BIG BREAKING: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್: ಸಿ.ಎಂ.ಸಿದ್ದರಾಮಯ್ಯ ಘೋಷಣೆ
BIG NEWS : ಕರ್ನಾಟಕದ ಮದರಸಾಗಳಲ್ಲಿ `ಕನ್ನಡ’ ಕಲಿಸಲು ಆದ್ಯತೆ : CM ಘೋಷಣೆ








