ಬೆಂಗಳೂರು : ಚೀನಾ ಸೇರಿದಂತೆ ಹೊರದೇಶಗಳಲ್ಲಿ ಕೊರೊನಾ ಭೀತಿ ಹೆಚ್ಚಳವಾದ ಬೆನ್ನಲ್ಲೇ ಕರ್ನಾಟಕದಲ್ಲೂ ಕಟ್ಟೆಚ್ಚರ ಮಾಡಲಾಗಿದ್ದು, ಸರ್ಕಾರ ಮಾರ್ಗಸೂಚಿ ಪ್ರಕಟ ಮಾಡಿದೆ.
ಇದೀಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ವಿವಿಯ ಕುಲಪತಿಗಳು ಸೂಚನೆ ನೀಡಿದ್ದು, ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದೆ.
ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ಸಂಬಂಧ ಮಹತ್ವದ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪ್ರಕಟಿಸೋ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ, ಆರೋಗ್ಯ ಇಲಾಖೆಯಿಂದ ಕೋವಿಡ್ ನಿಯಂತ್ರಣ ಕ್ರಮವನ್ನು ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಪರಿಸ್ಥಿತಿಯ ಹಿನ್ನಲೆಯಲ್ಲಿ ಪಾಲಿಸಬೇಕಾದ ಶಿಷ್ಠಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲಾ ಐಎಲ್ಐ, ಸಾರಿ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.
ಇನ್ನೂ ಕೋವಿಡ್ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪರೀಕ್ಷೆ ಒಳಪಡಿಸಲು ಅಗತ್ಯ ಸಂಖ್ಯೆಯ ಟೀಂಗಳನ್ನು ಬಿಬಿಎಂಪಿ ಹಾಗೂ ಜಿಲ್ಲೆಗಳು ಕಾರ್ಯೋನ್ಮುಖಗೊಳಿಸುವಂತೆ ತಿಳಿಸಲಾಗಿದೆ.ಬೆಂಗಳೂರು ವಿಮಾನ ನಿಲ್ದಾಣ ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಲ್ಲಿ, ಅಂತರ ರಾಷ್ಟ್ರೀಯ ಪ್ರಯಾಣಿಕರ ಪೈಕಿ ಶೇ.2ರನ್ನು ಯಾದೃಚ್ಛಿಕವಾಗಿ ಕೋವಿಡ್ ಪರೀಕ್ಷೆಗೆ ಈಗಾಗಲೇ ಒಳಪಡಿಸಲಾಗುತ್ತಿದ್ದು, ಹಾಗೆಯೇ ಮುಂದುವರೆಸುವಂತೆ ಸೂಚಿಸಿದೆ. ಜೊತೆಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಂತೆ ಹೇಳಿದೆ.
BIGG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಎಲ್ಲಾ ಹಂತದ ‘ವಿದ್ಯಾರ್ಥಿ ವೇತನ’ ಮುಂದುವರಿಕೆ