ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರವೇ ಕರೆಂಟ್ ಶಾಕ್ ಸಿಗಲಿದೆ. ವಿದ್ಯುತ್ ದರ ಹೆಚ್ಚಳಕ್ಕಾಗಿ ಕೆ ಇ ಆರ್ ಸಿಗೆ ಎಸ್ಕಾಂಗಳು ಪ್ರಸ್ತಾವನೆಯನ್ನು ಸಲ್ಲಿಸಿವೆ ಎಂಬುದಾಗಿ ತಿಳಿದು ಬಂದಿದೆ.
ಹೌದು. ಹಾಲು, ಬಸ್, ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ, ಈಗ ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಎಸ್ಕಾಂಗಳು ಪ್ರಸ್ತಾವನೆಯನ್ನು ಸಲ್ಲಿಸಿದ್ದಾವೆ.
ವಿದ್ಯುತ್ ಖರೀದಿಗೆ ತಗಲುವ ವೆಚ್ಚ ಹಾಗೂ ಪೂರೈಕೆ, ಕಲ್ಲಿದ್ದಲು ಸಂಗ್ರಹಣೆಗೆ ತಗಲುವ ವೆಚ್ಚ ಸೇರಿದಂತೆ ಇತರೆ ಖರ್ಚುಗಳು ಹೆಚ್ಚಾಗಿದ್ದು, ಆರ್ಥಿಕ ಒತ್ತಡವನ್ನು ಸರಿ ದೂಗಿಸಲು ವಿದ್ಯುತ್ ದರ ಹೆಚ್ಚಳ ಎಂಬುದು ಎಸ್ಕಾಂಗಳ ನಿಲುವಾಗಿದೆ.
ಈ ಹಿನ್ನಲೆಯಲ್ಲಿ ಪ್ರತಿ ಯೂನಿಟ್ ಗೆ 1 ರೂಪಾಯಿ 50 ಪೈಸೆ ಏರಿಕೆ ಮಾಡುವಂತೆ ಕೆ ಇ ಆರ್ ಸಿಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಲಾಗಿದೆ. ಒಂದು ವೇಳೆ ಸರ್ಕಾರ ಒಪ್ಪಿಗೆ ಸೂಚಿಸಿದ್ದೇ ಆದಲ್ಲಿ ಶೀಘ್ರವೇ ವಿದ್ಯುತ್ ದರ ಹೆಚ್ಚಳ ಆಗಲಿದೆ.
ಅಂದಹಾಗೇ 2009ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ, 2010ರಲ್ಲಿ 30 ಪೈಸೆ, 2011ರಲ್ಲಿ 28 ಪೈಸೆ, 2012ರಲ್ಲಿ 13 ಪೈಸೆ, 2017ರಲ್ಲಿ 48 ಪೈಸೆ, 2019ರಲ್ಲಿ 35 ಪೈಸೆ ಹಾಗೂ 2020ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿತ್ತು.
ಪ್ರಯಾಣಿಕರಿಗೆ ಬಿಗ್ ಶಾಕ್: ಹುಬ್ಬಳ್ಳಿ-ರಾಮೇಶ್ವರಂ-ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು
ಕುಂಭ ಮೇಳದ ಪ್ರಯುಕ್ತ ಶಿವಮೊಗ್ಗ ಟೌನ್-ಬನಾರಸ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ