ಶಿವಮೊಗ್ಗ : ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಿ ನಿಲ್ಲುತ್ತಾರೋ, ಬಿಡುತ್ತಾರೋ ನಮಗೇನು ಸಂಬಂಧ ಇಲ್ಲ. ಆದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೇ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದರು.
ಸಿಎಂ ಆಗಿದ್ದವರು ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಕೆಲಸ ಆಗುತ್ತದೆ ಎಂಬ ನಂಬಿಕೆ, ವಿಶ್ವಾಸದಿಂದ ಜನ ಕರೆಯುತ್ತಾರೆ. ಆದರೆ ಯಾವ ಕ್ಷೇತ್ರದಲ್ಲಿ ಗೆದ್ದಿದ್ದೀರೋ, ಯಾವ ಕ್ಷೇತ್ರದಲ್ಲಿ ಸೋತಿದ್ದೀರೋ ಅದೇ ಕ್ಷೇತ್ರದಲ್ಲಿ ಮುಂದುವರಿಯಬೇಕು ಎಂದರು. ಕ್ಷೇತ್ರ ಬದಲಿಸುತ್ತಾ ಹೋದರೆ ಜನರ ಪ್ರೀತಿ ವಿಶ್ವಾಸ ಗಳಿಸಿಲ್ಲ ಎಂಬ ಅಭಿಪ್ರಾಯ ಬರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ವಯಸ್ಸಿಗೂ ಮೊದಲೇ ಕೂದಲು ಬಿಳಿಯಾಗಿದ್ಯಾ? ಈ ಗಂಭೀರ ಕಾರಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ | White Hair
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ‘ಮಳೆ’ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ |Rain Alert Karnataka