ಶಿವಮೊಗ್ಗ : ಮಂಗಳೂರು ಸ್ಪೋಟ ಘಟನೆ ಖಂಡನೀಯ, ಇಂತಹ ದುಷ್ಕೃತ್ಯಗಳನ್ನು ಎಸಗುವವರನ್ನು ಗುಂಡಿಟ್ಟು ಕೊಲ್ಲಬೇಕು, ಇಲ್ಲವೇ ನೇಣಿಗೆ ಹಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಂಗಳೂರಿನ ನಾಗುರಿಯಲ್ಲಿ ನಡೆದ ಸ್ಪೋಟ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು ಉಗ್ರ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಶಾಂತ ಪ್ರಿಯ ಜಿಲ್ಲೆಯಾಗಿದೆ , ಇಲ್ಲಿದೆ ಬಂದು ಉಗ್ರ ಚಟುವಟಿಕೆ ನಡೆಸಿದರೆ ಅನುಮಾನ ಬರೋಲ್ಲ ಎಂದು ಇಲ್ಲಿಗೆ ಬರುತ್ತಿದ್ದಾರೆ, ಇಂತಹ ದುಷ್ಕೃತ್ಯಗಳನ್ನು ಎಸಗುವವರನ್ನು ಗುಂಡಿಟ್ಟು ಕೊಲ್ಲಬೇಕು, ಇಲ್ಲವೇ ನೇಣಿಗೆ ಹಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಈ ಹಿಂದೆ ತೆಗೆದುಕೊಳ್ಳುತ್ತಿದ್ದ ಕ್ರಮಕ್ಕಿಂತ ಈಗ ಬಿಗಿ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ.ಇನ್ನೂ ಹೆಚ್ಚಿನ ಕ್ರಮ ಸರ್ಕಾರ ಕೈಗೊಳ್ಳಬೇಕು. ಸರ್ಕಾರ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ‘ತುಂತುರು ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ