ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದೇ ವೇಳೆ ರಾಜಕೀಯ ನಾಯಕರ ವಿವಾದತ್ಮಕ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದೆ ಕೂಡ.
ದೇಶ ವಿಭಜನೆಯ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಎಸ್ ಈಶ್ವರಪ್ಪ ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಅಂತ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೇ ವೇಳೇ ಅರ್ಜಿ ವಿಚಾರಣೆ ನಡೆಸಿದ ಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ‘ ನಮ್ಮ ರಾಜಕೀಯ ನಾಯಕರು ಏಕೆ ಒಳ್ಳೆಯ ಭಾಷೆ ಬಳಸುತ್ತಿಲ್ಲ? ಮಾತನಾಡುವಾಗ ಉತ್ತಮ ಸಂಸ್ಕೃತಿಯನ್ನೇಕೆ ಪ್ರತಿಬಿಂಬಿಸುವುದಿಲ್ಲ? ಈ ರೀತಿ ಮಾತನಾಡಿ ಏಕೆ ಭಾಷೆಯ ಮೇಲೆ ದೌರ್ಜನ್ಯ ಎಸಗುತ್ತಾರೆ,” ಎಂದು ಬೇಸರ ವ್ಯಕ್ತಪಡಿಸಿದರು .
ಇನ್ನೂ ಇದೇ ವೇಳೇ, ಬಳಸುವ ಭಾಷೆಯ ಬಗ್ಗೆ ರಾಜಕಾರಣಿಗಳು ಎಚ್ಚರ ವಹಿಸಬೇಕು. ಕರ್ನಾಟಕ ವಿವಿಧ ಸಿದ್ಧಾಂತಗಳ ಜನರನ್ನು ಮಡಿಲಲ್ಲಿಇಟ್ಟುಕೊಂಡಿರುವ ರಾಜ್ಯ. ಅವರ ಮಾತುಗಳನ್ನು ಶಾಲಾ ಮಕ್ಕಳು ಸಹ ಗಮನಿಸುತ್ತಿರುತ್ತಾರೆ ಎನ್ನುವ ಅರಿವು ಇರಬೇಕು ಅಂತ ಹೇಳಿದರು. ಗುಂಡಿಕ್ಕಿ ಕೊಲ್ಲಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
UPDATE BREAKING : ದೆಹಲಿಯಲ್ಲಿ ಕ್ರೀಡಾಂಗಣದಲ್ಲಿ ಟೆಂಟ್ ಕುಸಿದು ದುರಂತ : 8 ಕ್ಕೂ ಹೆಚ್ಚು ಜನರಿಗೆ ಗಾಯ!
ಬಾಲರಾಮನಿಗೆ ಪ್ರತಿದಿನ ಒಂದು ಗಂಟೆ ವಿಶ್ರಾಂತಿ:ಇನ್ನುಂದೆ ಈ ಅವಧಿಯಲ್ಲಿ ‘ರಾಮಮಂದಿರ’ ಬಂದ್