ಬೆಂಗಳೂರು:ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡನೇ ಪಟ್ಟಿಯಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಅವರನ್ನು ಹಾವೇರಿ-ಗದಗ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
BIG BREAKING : ಹರ್ಯಾಣ ಸಿಎಂ ಸ್ಥಾನಕ್ಕೆ ʻಮನೋಹರ್ ಲಾಲ್ ಖಟ್ಟರ್ʼ ರಾಜೀನಾಮೆ ಸಾಧ್ಯತೆ
ಈ ನಡುವೆ ಹಾವೇರಿಯಿಂದ ಸ್ಪರ್ಧೆ ಮಾಡುವುದಕ್ಕೆ ಮುಂದಾಗಿದ್ದ ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ವರ್‌ಗೆ ಟಿಕೇಟ್ ನೀಡದೇ ಇರುವುದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಅವರಿಗೆ ಪಾರ್ಟಿಯಲ್ಲಿ ಒಳ್ಳೆ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿದೆ ಎನ್ನಲಾಗಿದೆ. ಇದಲ್ಲದೇ ಮೂಲಗಳ ಪ್ರಕಾರ, ಪ್ರಸ್ತುತ ಉಡುಪಿ ಚಿಕ್ಕಮಗಳೂರು ಸಂಸದೆಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಕೆಲವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ಅವರಿಗೆ ಟಿಕೆಟ್ ನೀಡದಂತೆ ಹೇಳಿದ್ದಾರೆ ಎನ್ನಲಾಗಿದೆ.
ಸೋಮವಾರದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಲವಾರು ಹಿರಿಯ ನಾಯಕರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಬಹುದಾದ ಸಂಭಾವ್ಯ ಆಯ್ಕೆಗಳ ಪಟ್ಟಿಯನ್ನು ಪರಿಶೀಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿವಿಧ ರಾಜ್ಯಗಳ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ಸಿಇಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.
BIG BREAKING : ಹರ್ಯಾಣ ಸಿಎಂ ಸ್ಥಾನಕ್ಕೆ ʻಮನೋಹರ್ ಲಾಲ್ ಖಟ್ಟರ್ʼ ರಾಜೀನಾಮೆ ಸಾಧ್ಯತೆ