ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಂವಿಧಾನದ ಬಗ್ಗೆ ವಿವಿಧ ಸೆಮಿನಾರ್‌ಗಳು, ಚರ್ಚೆಗಳು ಹಾಗೂ ಸಂಶೋಧನಾ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಂವಿಧಾನದ ಬಗ್ಗೆ ವಿವಿಧ ಸೆಮಿನಾರ್‌ಗಳು, ಚರ್ಚೆಗಳು ಹಾಗೂ ಸಂಶೋಧನಾ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪಿಸಲು ಇಂದು ಮುಖ್ಯಮಂತ್ರಿ… pic.twitter.com/FbixcWZjoF
— DIPR Karnataka (@KarnatakaVarthe) July 17, 2025
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ ರೂ.35.07 ಕೋಟಿಗಳ ಮೊತ್ತದಲ್ಲಿ Common Infrastructure for Industrial Parks (Food Park) ಮಾದರಿಯಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದ ಪರಂಪೋಕ ಸರ್ಕಾರಿ ಸರ್ವೆ ನಂ.124/*/1/ಪಿ2 ನಲ್ಲಿನ 194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿ ರೂ.83.79 ಕೋಟಿ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ತಾಲ್ಲೂಕು, ಮಂಡಿಕಲ್ಲು ಹೋಬಳಿ, ಯರಮಾರೇನಹಳ್ಳಿ ಗ್ರಾಮದಲ್ಲಿ 5-23 ಎಕರೆ / ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯ ಪಾತ್ರೆ ಅಡುಗೆ ಮನೆ ಮತ್ತು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ, ಇಸ್ಕಾನ್ ಬೆಂಗಳೂರು ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟವು ನಿರ್ಧರಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸ.ನಂ.66ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಇವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ, ಪುತ್ತೂರು ತಾಲ್ಲೂಕುಮಂಜೂರು ಮಾಡಲಾಗಿದೆ.
ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!