ಯಾದಗಿರಿ : ಕರಾವಳಿ ಬಳಿಕ ಇದೀಗ ಯಾದಗಿರಿಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದ್ದು, ಅನ್ಯಕೋಮಿನ ಯುವಕನನ್ನು ಭಜರಂಗದಳದ ಕಾರ್ಯಕರ್ತರು ಮಾರಾಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಯಾದಗಿರಿ ನಗರದ ಯುವಕನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದರು ಈ ಹಿನ್ನೆಲೆಯಲ್ಲಿ ಭಜರಂಗದಳ ಕಾರ್ಯಕರ್ತರು ಯುವಕನನ್ನು ಕಿಡ್ನಾಪ್ ಮಾಡಿ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ಯುವಕ ಕಾಲೇಜಿನಿಂದ ವಾಪಸ್ ಬರುವಾಗ ಒಂಭತ್ತು ಜನರ ಗ್ಯಾಂಗ್ ಯುವಕನನ್ನು ಅಪಹರಿಸಿ ಸತತ ಐದು ಗಂಟೆಗಳ ಕಾಲ ಹಲ್ಲೆ ಮಾಡಿದ್ದಾರೆ.
ಘಟನೆ ಸಂಬಂಧ ಯುವಕನ ಪೋಷಕರು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.