ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಚ್ 13 ರಿಂದ 14 ರವರೆಗೆ ಹಾಗೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾಚ್ 13 ರಿಂದ 16 ರವರೆಗೆ ನಡೆಸಬೇಕಿರುವ ಮೌಲ್ಯಾಂಕನವನ್ನು ಮುಂದೂಡಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 ಮೌಲ್ಯಾಂಕನವನ್ನು ನಡೆಸುವ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಸದರಿ ವಿಭಾಗೀಯ ಪೀಠವು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸರ್ವೋಚ್ಛ ನ್ಯಾಯಾಲಯವು ರದ್ದುಪಡಿಸಿರುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.