ನವದೆಹಲಿ : 12 ವರ್ಷದ ಬಾಲಕನ ಮೇಲೆ ನಾಲ್ವರು ಅತ್ಯಾಚಾರ ಎಸಗಿ ಬಳಿಕ ಅಪ್ರಾಪ್ರನನ್ನು ದೊಣ್ಣೆಗಳಿಂದ ಹೊಡೆದು ಅರೆಬೆಂದ ಸ್ಥಿತಿಯಲ್ಲಿ ಬಿಟ್ಟು ಹೋದಂತಹ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು, ದೆಹಲಿಯಲ್ಲಿ, ಹುಡುಗರು ಸಹ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.
ಮಹಿಳಾ ಸಮಿತಿಯು ಘಟನೆ ಸಂಬಂಧ ದೆಹಲಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದೆ ಎಂದು ಸ್ವಾತಿ ಪಲಿವಾಲ್ ಹೇಳಿದ್ದಾರೆ.
दिल्ली में लड़की तो क्या लड़के भी सुरक्षित नहीं हैं। एक 12 साल के लड़के के साथ 4 लोगों ने बुरी तरह से रेप किया और डंडों से पीटकर अधमरी हालत में छोड़कर चले गए। हमारी टीम ने मामले में FIR दर्ज करवाई। 1 आरोपी गिरफ़्तार, 3 अब भी फ़रार, दिल्ली पुलिस को नोटिस जारी कर रही हूँ। pic.twitter.com/tXrqK7xkwm
— Swati Maliwal (@SwatiJaiHind) September 25, 2022
ದೆಹಲಿಯಲ್ಲಿ ಹುಡುಗಿಯರು ಬಿಡಿ, ಗಂಡುಮಕ್ಕಳೂ ಸುರಕ್ಷಿತವಾಗಿಲ್ಲ. 12 ವರ್ಷದ ಬಾಲಕನ ಮೇಲೆ ನಾಲ್ವರು ಅಮಾನುಷವಾಗಿ ಅತ್ಯಾಚಾರವೆಸಗಿ, ದೊಣ್ಣೆಯಿಂದ ಹೊಡೆದು ಅರೆಬೆಂದ ಸ್ಥಿತಿಯಲ್ಲಿ ಬಿಟ್ಟಿದ್ದರು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಲು ಬಾಲಕ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಪೊಲೀಸರು ಒಬ್ಬರನ್ನು ಬಂಧಿಸಿದ್ದು, ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಸಮಿತಿ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
Job Alert: 250 ಕಿರಿಯ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ