ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಪೊಲೀಸರು ಬೆಂಗಳೂರಿನ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಪವಿತ್ರಾಗೌಡ ಪುತ್ರಿ ಖುಷಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಪರಿಸ್ಥಿತಿ ಏನೇ ಇರಲಿ ಅವಳು ನನಗೆ ಸಹಾಯ ಮಾಡುತ್ತಾರೆ. ನಾಣು ಕಣ್ಣು ಮುಚ್ಚಿಕೊಂಡು ನಂಬಿದರೂ ಅದು ನೀನೇ ಅಮ್ಮ, ದಿನದ ಯಾವುದೇ ಸಮಯದಲ್ಲಿ ಅವಳು ಯಾವಾಗಲೂ ನನ್ನೊಂದಿಗೆ ಇರುತ್ತಾಳೆ ಎಂದು ನನಗೆ ತಿಳಿದಿದೆ, ಅದು ಅವಳನ್ನು ಅತ್ಯುತ್ತಮ ತಾಯಿಯನ್ನಾಗಿ ಮಾಡುತ್ತದೆ ಮತ್ತು ಅವಳಂತಹ ತಾಯಿಯನ್ನು ಹೊಂದಲು ನಾನು ಅದೃಷ್ಟಶಾಲಿ! ಲವ್ ಯು ಅಮ್ಮಾ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್ಶೀಟ್ 24 ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.