ಹೊಸಪೇಟೆ: ನಮ್ಮ ಪಾಲನ್ನು ಕೇಂದ್ರ ಕೊಡದಿದ್ದರೂ ನಾವು ಸಾಧಿಸಿ ತೊರಿಸಿದ್ದೀವಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂಬುದಾಗಿ ಗುಡುಗಿದ್ದಾರೆ.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ತಮ್ಮ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.
15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ… pic.twitter.com/4aA8Qv3bw2
— CM of Karnataka (@CMofKarnataka) May 20, 2025