Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಸ್ತಿ ವಿವರ ಘೋಷಣೆಯಲ್ಲಿ ಲೋಪ : ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ !

20/04/2026 8:28 PM

ಚುನಾವಣಾ ನೀತಿ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ಆಯೋಗಕ್ಕೆ 700 ನಾಯಕರು, ಕಾರ್ಯಕರ್ತರಿಂದ ದೂರು

20/04/2026 8:27 PM

ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್: ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಾಧೀಶರ ನಿರಾಕರಣೆ

20/04/2026 8:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ
KARNATAKA

ಪೊಲೀಸರು ಅನುಮತಿ ನಿರಾಕರಿಸಿದರೂ, ಸರ್ಕಾರದಲ್ಲಿರುವ ಕಾಂಗ್ರೆಸ್‌ ನಾಯಕರು ಒತ್ತಡ: ಆರ್.ಅಶೋಕ್ ಗಂಭೀರ ಆರೋಪ

By kannadanewsnow0906/06/2025 5:50 PM

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್‌ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ ಹೀಗಾಗಿದೆ. ಆರ್‌ಸಿಬಿ ತಂಡ ಐಪಿಎಲ್‌ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್‌ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರೇ ಬೌಲರ್‌ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್‌ ಮಾಡಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್‌ ವಿಕೆಟ್‌ ಆಗಿದ್ದಾರೆ. 11 ಪ್ರತಿಭಾವಂತ ಯುವಜನರು ಬಲಿಯಾಗಿದ್ದಾರೆ ಎಂದು ದೂರಿದರು.

ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ ಆತುರದ ತೀರ್ಮಾನವೆಂದು ಕಾಂಗ್ರೆಸ್‌ನ ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಸಮರ್ಪಣಾ ಸಮಾವೇಶ ಮಾಡುವ ಮುನ್ನ, ಬೆಂಗಳೂರಿನಲ್ಲಿ ಪ್ರವಾಹ ಬಂದರೂ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯುವಜನರಿಗೆ ಸಂಬಂಧಿಸಿದಂತೆ ಕ್ರೀಡಾ ಕಾರ್ಯಕ್ರಮ ಮಾಡುವಾಗ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಕಾಂಗ್ರೆಸ್‌ನ ಸಮಾವೇಶಕ್ಕೆ ಮಾಡಿದ್ದ ಸಿದ್ಧತೆಯ ಒಂದು ಪರ್ಸೆಂಟ್‌ನಷ್ಟು ಸಮಯವನ್ನು ಇಲ್ಲಿ ನೀಡಿದ್ದರೆ ಯುವಜನರ ಬದುಕು ಉಳಿಯುತ್ತಿತ್ತು ಎಂದರು.

ಆಯುಕ್ತರ ಅಮಾನತು

ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಪೊಲೀಸ್‌ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಜನರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಜೊತೆಗಿದ್ದೇವೆ ಎಂದು ಹೇಳುತ್ತಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ನಿತ್ರಾಣರಾಗಿದ್ದ ಯುವಕ ಯುವತಿಯರನ್ನು ಪೊಲೀಸರು ಕೈಯಲ್ಲಿ ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಯಾವುದೇ ಕಾಂಗ್ರೆಸ್‌ ಕಾರ್ಯಕರ್ತರು ಇರಲಿಲ್ಲ. ಆದರೆ ಈಗ ಪೊಲೀಸರನ್ನೇ ಅಮಾನತು ಮಾಡಲಾಗಿದೆ. ನಾವು ನ್ಯಾಯ ಸಿಗುವವರೆಗೂ ರಾಜಕಾರಣ ಮಾಡುತ್ತೇವೆ. ಯಾರನ್ನೋ ಹರಕೆಯ ಕುರಿ ಮಾಡುವುದರ ವಿರುದ್ಧ ನಾವು ರಾಜಕಾರಣ ಮಾಡುತ್ತೇವೆ ಎಂದರು.

ಪೊಲೀಸ್‌ ಆಯುಕ್ತರಿಂದ ಅನುಮತಿ ನೀಡಲು ನಿರಾಕರಿಸಲಾಗಿತ್ತು, ಆದರೆ ಆರ್‌ಸಿಬಿ ಫ್ರಾಂಚೈಸಿಯವರು ಸಂಜೆ ಕಾರ್ಯಕ್ರಮ ಮಾಡಬೇಕೆಂದು ನಿರ್ಧರಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆಯಲಾಗಿದೆ. ಅಂದರೆ ಇದು ಅನಧಿಕೃತ ಕಾರ್ಯಕ್ರಮವಾಗಿದೆ. 144 ಸೆಕ್ಷನ್‌ ಹಾಕಿದ್ದರೆ ಕಾರ್ಯಕ್ರಮಕ್ಕೆ ಯಾರೂ ಬರುತ್ತಿರಲಿಲ್ಲ. ಇದು ಅನಧಿಕೃತ ಎಂದಮೇಲೆ ಆ ಸೆಕ್ಷನ್‌ ಹಾಕಿ ಕಾರ್ಯಕ್ರಮವನ್ನು ರದ್ದು ಮಾಡಬೇಕಿತ್ತು. ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಾವೆಲ್ಲರೂ ಸರ್ಕಾರವೇ ಅಪರಾಧಿ, ತಪ್ಪಿತಸ್ಥರೇ ಸರ್ಕಾರದವರು ಎಂದು ಹೇಳುತ್ತಿದ್ದೇವೆ. ಪ್ರಾಂಚೈಸಿಯವರಿಗೆ ಕಾರ್ಯಕ್ರಮ ಮಾಡು ಎಂದು ಸೂಚನೆ ನೀಡಿದವರು ಯಾರು? ಕ್ರಿಕೆಟಿಗರನ್ನು ಕರೆದುಕೊಂಡು ಬಂದವರು ಯಾರು? ಎಂದು ಪ್ರಶ್ನೆ ಮಾಡಿದರು.

ಎರಡು ಕಡೆ ಕಾರ್ಯಕ್ರಮ ನಡೆಸುವುದು ಬೇಡ ಎಂದು ಪೊಲೀಸರು ಹೇಳಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಘಟನೆ ನಡೆದಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಈ ಎರಡೂ ಸ್ಥಳಗಳು ಅಕ್ಕಪಕ್ಕದಲ್ಲೇ ಇವೆ. ಪೊಲೀಸರು ಅನುಮತಿ ನೀಡದಿದ್ದರೂ, ಕಾಂಗ್ರೆಸ್‌ ಸರ್ಕಾರ ಕಾನೂನು ಕೈಗೆ ತೆಗೆದುಕೊಂಡು ಕಾರ್ಯಕ್ರಮ ನಡೆಸಿದೆ. ಎಲ್ಲರೂ ಫೋಟೋ ಶೂಟ್‌ನಲ್ಲಿ ನಿರತರಾಗಿದ್ದರೇ ಹೊರತು, ಜನರ ಬಗ್ಗೆ ಯಾರೂ ಯೋಚಿಸಲಿಲ್ಲ ಎಂದರು.

ಸರ್ಕಾರವೇ ಅಪರಾಧಿ

ಮೊದಲು ಜಿಲ್ಲಾಧಿಕಾರಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದರು. ಮತ್ತೆ ಸಿಐಡಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ. ಇದು ಕೂಡ ಮುಡಾ, ವಾಲ್ಮೀಕಿ ನಿಗಮದ ಹಗರಣದಂತೆಯೇ ಮುಚ್ಚಿಹೋಗಲಿದೆ. ಇಲ್ಲಿ ಸರ್ಕಾರವೇ ಅಪರಾಧಿಯಾಗಿರುವುದರಿಂದ, ಸರ್ಕಾರದಲ್ಲಿರುವ ಯಾರೂ ತನಿಖೆ ಮಾಡಬಾರದು. ಇದನ್ನು ನ್ಯಾಯಾಧೀಶರೇ ತನಿಖೆ ಮಾಡಬೇಕು. ಅನುಮತಿ ನೀಡಲು ಒತ್ತಡ ಹೇರಿದವರು ಯಾರು, ಕಾರ್ಯಕ್ರಮ ನಡೆಸಲು ಸೂಚನೆ ನೀಡಿದವರು ಯಾರು ಎಂಬುದು ಗೊತ್ತಾಗಬೇಕಿದೆ. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

20/04/2026 8:13 PM2 Mins Read

ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

20/04/2026 8:10 PM1 Min Read

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM3 Mins Read
Recent News

ಆಸ್ತಿ ವಿವರ ಘೋಷಣೆಯಲ್ಲಿ ಲೋಪ : ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ !

20/04/2026 8:28 PM

ಚುನಾವಣಾ ನೀತಿ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ಧ ಆಯೋಗಕ್ಕೆ 700 ನಾಯಕರು, ಕಾರ್ಯಕರ್ತರಿಂದ ದೂರು

20/04/2026 8:27 PM

ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್: ಮದ್ಯ ನೀತಿ ಹಗರಣದ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಾಧೀಶರ ನಿರಾಕರಣೆ

20/04/2026 8:21 PM

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಮರುಜೀವ: ವಾಷಿಂಗ್ಟನ್‌ನಲ್ಲಿ ಇಂದಿನಿಂದ ನಿರ್ಣಾಯಕ ಮಾತುಕತೆ; ಸುಂಕ ಕಡಿತದ ಮೇಲೆ ಎಲ್ಲರ ಕಣ್ಣು!

20/04/2026 8:20 PM
State News
KARNATAKA

ಗಮನಿಸಿ : ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

By kannadanewsnow5720/04/2026 8:13 PM KARNATAKA 2 Mins Read

ನಮ್ಮ ದಿನನಿತ್ಯದ ಹವ್ಯಾಸಗಳು ನಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ವಿಷಯಗಳನ್ನು ಬಿಚ್ಚಿಡುತ್ತವೆ. ಅದರಲ್ಲಿ ಪ್ರಮುಖವಾದುದು ನಾವು ಮಲಗುವ ರೀತಿ. ಪ್ರತಿಯೊಬ್ಬರೂ…

ನಾಳೆ ಸಾಗರದ ಜೋಸೆಫ್ ನಗರದಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

20/04/2026 8:10 PM

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.