ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗುವ ಮುನ್ನ ಸಂಸತ್ತಿನಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರು ಗಲಾಟೆ ನಡುವೆಯೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಲೋಕಸಭೆಯಲ್ಲಿ ಪ್ರತಿಭಟನಾಕಾರರನ್ನು ತರಾಟೆಗೆ ತೆಗೆದುಕೊಂಡರು ಇದೇ ವೇಳೆ ಅವರು ಕಾನೂನಿಗಿಂತ ಮಿಗಿಲಾದವರು ಎಂದು ಕಾಂಗ್ರೆಸ್ ಭಾವಿಸಿದೆ ಎಂದು ಹೇಳಿದರು.
ಸಂಸತ್ತಿನಲ್ಲಿ ಪ್ರಲ್ಹಾದ್ ಜೋಶಿ “ಕಾನೂನಿನ ಮುಂದೆ ಎಲ್ಲರೂ ಸಮಾನರು ಅಲ್ಲವೇ? ಕಾಂಗ್ರೆಸ್ ಅಧ್ಯಕ್ಷೆ (ಸೋನಿಯಾ ಗಾಂಧಿ) ಅತಿಮಾನುಷ ವ್ಯಕ್ತಿಯೇ? ಅವರು (ಕಾಂಗ್ರೆಸ್) ತಾವು ಕಾನೂನಿಗಿಂತ ಮೇಲಿನವರು ಎಂದು ಭಾವಿಸುತ್ತಾರೆ… “ಎಂದು ಜೋಶಿ ಲೋಕಸಭೆಯಲ್ಲಿ ಹೇಳಿದರು. ಏತನ್ಮಧ್ಯೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದರು.
ಜಾರಿ ನಿರ್ದೇಶನಾಲಯದ (ಇಡಿ) ದುರುಪಯೋಗದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಠಾಗೋರ್ ಗುರುವಾರ ನಿಲುವಳಿ ಸೂಚನೆ ನೋಟಿಸ್ ನೀಡಿದ್ದಾರೆ.