Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ
KARNATAKA

ಅಸ್ಪೃಶ್ಯತೆ ನಿರ್ಮೂಲನೆಗೆ ಎಲ್ಲರೂ ದೃಢ ಸಂಕಲ್ಪ ಮಾಡಿ: SC, ST ಮೇಲ್ವಿಚಾರಕಿ ಮತ್ತು ಬಲವರ್ಧನೆ ಸಮಿತಿ ಸಂಚಾಲಕಿ ಪಿ.ಯಶೋಧ

By ವಸಂತ ಬಿ ಈಶ್ವರಗೆರೆ

ಮಂಡ್ಯ : ಸಮಾಜದಲ್ಲಿ ಈಗಲೂ ಆಚರಣೆಯಲ್ಲಿರುವ ಅಸ್ಪೃಶ್ಯತೆ ನಿರ್ಮೂಲನೆಗೆ ಪ್ರತಿಯೊಬ್ಬರು ದೃಢ ಸಂಕಲ್ಪ ಮಾಡಬೇಕೆಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಕಿ ಮತ್ತು ಬಲವರ್ಧನ ಸಮಿತಿಯ ಸಂಚಾಲಕಿ ಪಿ.ಯಶೋಧ ರವರು ಕರೆ ನೀಡಿದರು.

ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಸೇರಿದಂತೆ ಹಲವು ಇಲಾಖೆಗಳ ವತಿಯಿಂದ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಅನ್ವಯ ವಿಚಾರಗೋಷ್ಠಿ ಹಾಗೂ ಕಾರ್ಯಾಗಾರ ಕುರಿತು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಅಸ್ಪೃಶ್ಯತೆ ಆಚರಣೆ ಇಂದಿಗೂ ಜೀವಂತವಾಗಿರುವುದು ವಿಷಾದನೀಯ. ಜನಾಂದೋಲನದ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಾಗ ಮಾತ್ರ ಅಸ್ಪೃಶ್ಯತೆ ತೊಲಗಿಸಲು ಸಾಧ್ಯ. ಸಾಮಾಜಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕ ಮಾನೋಭಾವದಿಂದ ನೋಡಿದಾಗ ಅಸ್ಪೃಶ್ಯತೆ, ಜಾತಿ ಪದ್ಧತಿ ಹಾಗೂ ತಾರತಮ್ಯ ಹೋಗಲಾಡಿಸಬಹುದು ಎಂದು ಅಭಿಪ್ರಾಯಪಟ್ಟರು.

ಭಾರತದ ಉಪ ಖಂಡಗಳಲ್ಲಿ ಮಾತ್ರ ಈ ರೀತಿಯ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ಕೇವಲ ಹುಟ್ಟುವಿನಿಂದ ಮನುಷ್ಯತ್ವವನ್ನು ಮರೆತು ಅವನು ಮೇಲು, ಇವನು ಕೀಳು ಇತ್ಯಾದಿ ಬೇಧ ಭಾವಗಳನ್ನು ತೋರುವುದು ಸಮಾಜಕ್ಕೆ ಅಂಟಿರುವ ಶಾಪವಾಗಿದೆ. ದೇಶದ ಸಂವಿಧಾನದಲ್ಲಿ ಏಕತೆ, ಸಮಗ್ರತೆ ಇರಬೇಕು ಎಂದಿದೆ ಇದನ್ನು ಎಲ್ಲರೂ ಪಾಲಿಸಬೇಕು ಹಾಗೂ ಸಮಾಜದಲ್ಲಿ ಅಸ್ಪೃಶ್ಯತೆ ಎಂಬುದು ಒಂದು ಪಿಡುಗಾಗಿದ್ದು ಇದನ್ನು ತೊಲಗಿಸಲು ಎಲ್ಲರೂ ಧೃಡ ಸಂಕಲ್ಪ ಮಾಡಬೇಕೆಂದರು.

ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, 21ನೇ ಶತಮಾನದಲ್ಲೂ ಗ್ರಾಮೀಣ ಪ್ರದೇಶದಲ್ಲಿ ಅಸ್ಪೃಶ್ಯತೆ ಆಚರಿಸುತ್ತಿರುವುದು ದುರಂತದ ಸಂಗತಿಯಾಗಿದೆ. ಅದರ ನಿವಾರಣೆಯ ಬಗ್ಗೆ ಜನತೆಗೆ ಎಷ್ಟೆ ಜಾಗೃತಿ ಹಾಗೂ ಅರಿವು ಮೂಡಿಸಿದರೂ ಇಂದಿಗೂ ಆಚರಣೆಯಲ್ಲಿರುವುದು ಅವಮಾನದ ಸಂಗತಿ. ದೇಶವು ಎಲ್ಲಾ ರಂಗಗಳಲ್ಲೂ ಪ್ರಗತಿ ಹೊಂದುತ್ತಿದ್ದರೂ ಅಸ್ಪೃಶ್ಯತೆ ವಿಷಯದಲ್ಲಿ ಹಿಂದೆ ಇದೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರೀಕರು ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಹೆಚ್ಚಿನ ಸಹಕಾರ ನೀಡುವುದರ ಜತೆಗೆ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಡಿವೈಎಸ್ಪಿ ಯಶವಂತ್ ಕುಮಾರ್ ಮಾತನಾಡಿ, ಅಸ್ಪೃಶ್ಯತೆಗೆ ಒಳಗಾದವರು ಅಥವಾ ಅಂತಹ ಆಚರಣೆಗೆ ಸಾಕ್ಷಿಯಾದವರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಲು ಹೆದರುತ್ತಾರೆ. ಮುಂದೆ ಕಾನೂನು ತೊಡಕುಗಳು ಉಂಟಾಗಬಹುದು ಎಂಬಭೀತಿಯಿಂದ ದೂರು ನೀಡಲು ಹಿಂದೇಟು ಹಾಕುತ್ತಾರೆ. ಆದ್ದರಿಂದ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಆ ಬಗ್ಗೆ ದೂರುದಾರ ಕೂಡಲೇ ಹತ್ತಿರದ ಪೋಲೀಸರ ಗಮನಕ್ಕೆ ತರಬೇಕು ಆಗ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮದ್ದೂರು ನಗರದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಸ್.ಸಿ. ನಳಿನ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ತಾ.ಪಂ ಇ.ಓ.ರಾಮಲಿಂಗಯ್ಯ, ಸಮಾಜ ಕಲ್ಯಾಣಾಧಿಕಾರಿ ನಾಗರಾಜು, ಬಿ.ಇ.ಓ ಧನಂಜಯ, ಆರಕ್ಷಕ ವೃತ್ತ ನಿರೀಕ್ಷಕರಾದ ನವೀನ್ ಕುಮಾರ್, ನಾರಾಯಣಿ, ಅನಿಲ್ ಕುಮಾರ್, ಜಾಗೃತಿ ಸಮಿತಿಯ ಸದಸ್ಯ ಚಿದಂಬರಮೂರ್ತಿ ಸೇರಿದಂತೆ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಮಂಡ್ಯದಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಬಿಟ್ಟು ಪುಟ್ ಪಾತ್ ಏರಿದ ಸಾರಿಗೆ ಬಸ್: 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.