ಆಮೀಷಕ್ಕೆ ಒಳಗಾಗದೆ ಸ್ವಯಿಚ್ಛೆಯಿಂದ ಎಲ್ಲರೂ ಮತ ಚಲಾಯಿಸಿ: ತುಷಾರ್ ಗಿರಿ ನಾಥ್

ಬೆಂಗಳೂರು: ಆಮೀಷಕ್ಕೆ ಒಳಗಾಗದೆ ಸ್ವಯಿಚ್ಛೆಯಿಂದ ಎಲ್ಲರೂ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಹಾಗೂ ಎಲ್ಲಾ ಮತದಾರರಿಗೆ ಅರಿವು ಮೂಡಿಸುವಂತೆ ಕರೆ ನೀಡಿದರು. ಮಹದೇವಪುರದ ಗುಂಜೂರು ಬಳಿಯಿರುವ ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸ್ವಯಿಚ್ಛೆಯಿಂದ ಮುಂದೆ ಬಂದು ಮತದಾನ ಮಾಡಬೇಕೆಂದು ತಿಳಿಸಿದರು. … Continue reading ಆಮೀಷಕ್ಕೆ ಒಳಗಾಗದೆ ಸ್ವಯಿಚ್ಛೆಯಿಂದ ಎಲ್ಲರೂ ಮತ ಚಲಾಯಿಸಿ: ತುಷಾರ್ ಗಿರಿ ನಾಥ್