ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ನೀಡಿದ್ದಂತ ರೇಪ್ ಕೇಸ್ ದೂರಿನಲ್ಲಿ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯಗೆ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಎಸ್ ಕೆ ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದಂತ ಎಸ್ ಕೆ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಹಾಸ್ಟೆಲ್ ವಾರ್ಡನ್ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇಂದು ಕೋರ್ಟ್ ನಲ್ಲಿ ಎಸ್ ಕೆ ಬಸವರಾಜನ್ ಪರ ವಕೀಲರು ಪ್ರಕರಣದಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ಅಂದಹಾಗೇ ಇಂದು ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ಖುದ್ದು ಎಸ್ ಕೆ ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಬಸವರಾಜನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.